ಸರ್ವೇ ಕೈಗೊಂಡು ಪಂಚ ಗ್ಯಾರಂಟಿ ಯೋಜನೆಗಳ ಅರ್ಹರಿಗೆ ತಲುಪಿಸಿ- ಅಶೋಕ ಮಂದಾಲಿ

| Published : May 07 2025, 12:46 AM IST

ಸಾರಾಂಶ

ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಸರ್ವೇ ಕೈಗೊಂಡು ಸರ್ಕಾರದಿಂದ ಅನುಷ್ಠಾನಿತ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದರು.

ಗದಗ: ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಸರ್ವೇ ಕೈಗೊಂಡು ಸರ್ಕಾರದಿಂದ ಅನುಷ್ಠಾನಿತ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದರು.

ಅವರು ಗದಗ ನಗರದ ಎಸಿ ಕಚೇರಿ ಆವರಣದಲ್ಲಿ ಜರುಗಿದ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರು ತಮಗೆ ನೇಮಿಸಿದ ಮನೆಗಳಿಗೆ ಹೋಗಿ ಸರ್ವೆ ಮಾಡಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿದರ ಬಗ್ಗೆ ಪರಿಶೀಲನೆ ಮಾಡಬೇಕು, ಗ್ಯಾರಂಟಿ ಯೋಜನೆಗಳು ಇನ್ನು ತಲುಪದೇ ಇದ್ದಲ್ಲಿ, ಅದಕ್ಕೆ ಕಾರಣವನ್ನು ಕಂಡು ಹಿಡಿದು ಪರಿಶೀಲಿಸಿ ಅದಕ್ಕೆ ಪರಿಹಾರವನ್ನು ಕಲ್ಪಿಸಬೇಕು ಎಂದರು. ತಾಲೂಕಿನಲ್ಲಿ 533 ಗೃಹಲಕ್ಷೀ ಯೋಜನೆಯ ಫಲಾನುಭವಿಗಳು ಮರಣ ಹೊಂದಿದ್ದು, ಸಂಬಂಧಿಸಿದ ಅಂಗನವಾಡಿ ಕಾರ್ಯಕರ್ತೆಯರು ಮರಣ ಪತ್ರ ತೆಗೆದುಕೊಂಡು ಅವರ ಹೆಸರನ್ನು ಕಡಿಮೆ ಮಾಡಬೇಕು ಎಂದರು. ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯ ಕೃಷ್ಣಗೌಡ ಪಾಟೀಲ ಮುಂತಾದವರು ಮಾತನಾಡಿದರು. ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯ ಸಂಗು ಕರಕಲಮಟ್ಟಿ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನಿತ ಅಧಿಕಾರಿಗಳು ಹಾಜರಿದ್ದರು.