ರಾಮನಗರ: ವಲಸೆ ಕಾರ್ಮಿಕರಲ್ಲಿ ಆನೆಕಾಲು ರೋಗ ಕಂಡು ಬರುತ್ತಿದೆ. ಹಾಗಾಗಿ ಜಿಲ್ಲೆಯ ಬಿಡದಿ ಹಾಗೂ ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿಯ ವಲಸೆ ಕಾರ್ಮಿಕರ ಮಾಹಿತಿ ಪಡೆದು ಆರೋಗ್ಯ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು

ರಾಮನಗರ: ವಲಸೆ ಕಾರ್ಮಿಕರಲ್ಲಿ ಆನೆಕಾಲು ರೋಗ ಕಂಡು ಬರುತ್ತಿದೆ. ಹಾಗಾಗಿ ಜಿಲ್ಲೆಯ ಬಿಡದಿ ಹಾಗೂ ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿಯ ವಲಸೆ ಕಾರ್ಮಿಕರ ಮಾಹಿತಿ ಪಡೆದು ಆರೋಗ್ಯ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಅಭಿಯಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆನೆಕಾಲು ರೋಗದ ಅರಿವು ಮೂಡಿಸಲು ಕ್ರಮ ವಹಿಸಬೇಕು. ಆನೆಕಾಲು ರೋಗ ಸೋಂಕಿತ ಕ್ಯೂಲೆಕ್ಸ್ ಸೊಳ್ಳೆಗಳು ಕಚ್ಚುವುದರಿಂದ ಹರಡುತ್ತದೆ. ಕ್ರಮೇಣ ಕೈಕಾಲು ದಪ್ಪವಾಗುತ್ತದೆ. ಈ ಕುರಿತು ಸ್ವಚ್ಛ ನೀರಿನ್ನು ಬಳಸಿ ಸಾಬೂನಿನಿಂದ ಸ್ವಚ್ಛಗೊಳಿಸಬೇಕು. ಮೆದುವಾದ ಬಟ್ಟೆಯಿಂದ ಒರೆಸಿ ಒಣಗಿಸಬೇಕು. ಬೆರಳು ಸಂದಿಗಳನ್ನು ಸ್ವಚ್ಛಗೊಳಿಸಿ ನಂತರ ಅವಶ್ಯವಿದ್ದಲ್ಲಿ ಮುಲಾಮು ಹಚ್ಚಬೇಕು ಹಾಗೂ ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಆನೆಕಾಲು ರೋಗದ ಅರಿವು ಮೂಡಿಸಲು ಕ್ರಮ ವಹಿಸಬೇಕೆಂದು ಕಾರ್ಮಿಕ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ತಾಯಿ ಮರಣ ಹಾಗೂ ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಗರ್ಭಿಣಿ-ಬಾಣಂತಿಯರ ಮನೆಗೆ ಭೇಟಿ ನೀಡಿ ನಿಯಮಿತ ಗರ್ಭಿಣಿ, ತಾಯಿ-ಮಗುವಿನ ತಪಾಸಣೆ ಮಾಡಿಸಬೇಕು.

ಮಲೇರಿಯಾ, ಡೆಂಘೀ, ಚಿಕೂನ್ ಗುನ್ಯಾ ಇತರ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಗಟ್ಟಲು ಮನೆಯ ಸುತ್ತಮುತ್ತ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಲು ಸಂಬಂಧಿಸಿದ ಇಲಾಖೆಗಳು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹೇಳಿದರು.

ದಢಾರ ರುಬೆಲ್ಲಾ ಸಾಂಕ್ರಾಮಿಕ ರೋಗವಾಗಿದ್ದು, ಇದು ಒಬ್ಬರಿಂದ ಒಬ್ಬರಿಗೆ ಬಹುಬೇಗ ಹರಡುತ್ತದೆ. ದಢಾರ-ರುಬೆಲ್ಲಾ ಕಾಯಿಲೆಯಿಂದ ರಕ್ಷಿಸಲು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಮಕ್ಕಳಿಗೆ 9ರಿಂದ 11 ತಿಂಗಳುಗಳಲ್ಲಿ ಮೊದಲನೇ ಡೋಸ್ ಮತ್ತು 16 ರಿಂದ 24 ತಿಂಗಳಲ್ಲಿ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗುತ್ತದೆ. ದಢಾರ ಮತ್ತು ರುಬೆಲ್ಲಾ ಲಸಿಕಾಕರಣದಡಿ ಕನಿಷ್ಠ ಶೇ.95ರಷ್ಟು ಪ್ರಗತಿ ಸಾಧಿಸಬೇಕು. ಲಸಿಕೆಯ ಮೊದಲ ಹಾಗೂ ಎರಡನೇ ಡೋಸ್‌ಗಳ ಡ್ರಾಪ್ ಔಟ್ ರೇಟ್ ಶೂನ್ಯವಿರಬೇಕು ಹಾಗೂ ಓoಟಿ- Non-Measles Non Rubella discard rate 1 ಲಕ್ಷ ಜನಸಂಖ್ಯೆಗೆ 2 ಕ್ಕಿಂತ ಹೆಚ್ಚಿರುವುದು ದಢಾರ-ರುಬೆಲ್ಲಾ ನಿರ್ಮೂಲನೆ ಅಭಿಯಾನದ ಪ್ರಮುಖ ಗುರಿ.ಜಿಲ್ಲೆಯಲ್ಲಿ ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮಗಳಡಿ ಪ್ರಥಮ ಚಿಕಿತ್ಸೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಿರಂಜನ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಚಂದ್ರಶೇಖರಯ್ಯ, ಜಿಲ್ಲಾ ರೋಗವಾಹಕ ಆಶ್ರಿತ ರೋಗಳ ನಿಯಂತ್ರಣಾಧಿಕಾರಿ ಡಾ.ಪದ್ಮಾವತಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಿರಣ್ ಶಂಕರ್, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಕುಮಾರ್, ಎಲ್ಲಾ ತಾಲೂಕು ಆರೋಗ್ಯಧಿಕಾರಿಗಳು, ಇತರೆ ಇಲಾಖಾಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.

17ಕೆಆರ್ ಎಂಎನ್ 2.ಜೆಪಿಜಿ

ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಆರೋಗ್ಯ ಅಭಿಯಾನ ಸಭೆ ನಡೆಯಿತು.