ಸಾರಾಂಶ
ನಗರದ 16 ಕೇಂದ್ರಗಳಲ್ಲಿ ಆ.27ರಂದು ನಡೆಯಲಿರುವ ಪರೀಕ್ಷೆಯನ್ನು ಯಾವುದೇ ಲೋಪದೋಷವಾಗದಂತೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ತುಮಕೂರಿನಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ । 27ಕ್ಕೆ ಕೆಪಿಎಸ್‌ಸಿ ಪರೀಕ್ಷೆ
ಕನ್ನಡಪ್ರಭ ವಾರ್ತೆ ತುಮಕೂರುನಗರದ 16 ಕೇಂದ್ರಗಳಲ್ಲಿ ಆ.27ರಂದು ನಡೆಯಲಿರುವ ಪರೀಕ್ಷೆಯನ್ನು ಯಾವುದೇ ಲೋಪದೋಷವಾಗದಂತೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕೆಪಿಎಸ್‌ಸಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಪರೀಕ್ಷೆ ನಡೆಯುವ ಕೊಠಡಿಗಳಲ್ಲಿ ಬೆಳಕು, ಕುಡಿಯುವ ನೀರು, ಸುಸ್ಥಿತಿಯಲ್ಲಿರುವ ಗಡಿಯಾರ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಇಂದೇ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ:
ಕೆಪಿಎಸ್ಸಿ ಪರೀಕ್ಷೆ ನಡೆಯಲಿರುವ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿಗಳು ಇಂದೇ ಭೇಟಿ ನೀಡಿ ಸಿಸಿ ಕ್ಯಾಮೆರಾ, ವಿದ್ಯುತ್ ಸಂಪರ್ಕ, ಡೆಸ್ಕ್‌ಗಳು ಸುಸ್ಥಿತಿಯಲ್ಲಿರುವಂತೆ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು ಹಾಗೂ ಪ್ರಶ್ನೆ ಪತ್ರಿಕೆಯನ್ನು ನಿಗದಿತ ಸಮಯಕ್ಕೆ ಸರಿಯಾಗಿ ಪರಿಕ್ಷಾರ್ಥಿಗಳಿಗೆ ವಿತರಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ ಆ.27ರಂದು ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದರು.ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಉಪ ವಿಭಾಗಾಧಿಕಾರಿಗಳಾದ ಗೌರವ್ ಕುಮಾರ್ ಶೆಟ್ಟಿ, ಸಪ್ತಶ್ರೀ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಖಾದರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಮಪ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ನಾರಾಯಣಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಾಲಗುರುಮೂರ್ತಿ, ಡಿಡಿಪಿಐ ಕೆ. ಮಂಜುನಾಥ್ ಇದ್ದರು.