ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರದ ಕುರಿತು ಸೂಕ್ತ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

| Published : May 31 2024, 02:17 AM IST

ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರದ ಕುರಿತು ಸೂಕ್ತ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಎಲ್ಲಾ ಜಿಲ್ಲೆಗಳ ನಿಗಮದಿಂದ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ತೆಗೆದುಕೊಂಡು ಪರಿಶಿಷ್ಟರ ಅಭಿವೃದ್ಧಿಗೆ ಕುತ್ತು ತರಲಾಗಿದೆ. ಅಧಿಕಾರಿಗಳ ಮೇಲೆ ಒತ್ತಡ ತಂದು ನಿಗಮದಿಂದ ಹಣವನ್ನು ಪಡೆದು ದುರುಪಯೋಗ ಮಾಡಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಮೈಸೂರು

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರದ ಕುರಿತಂತೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಲು ಆಗ್ರಹಿಸಿ ನಾಯಕ ಜನಾಂಗದ ಹಿತರಕ್ಷಣಾ ವೇದಿಕೆಯವರು ಮೈಸೂರು ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತಂತೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ನಿಗಮದ ನಿಷ್ಠಾವಂತ ಅಧಿಕಾರಿಯಾಗಿದ್ದ ಚಂದ್ರಶೇಖರ್‌ಅವರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಡೆತ್‌ ನೋಟ್‌ ನಲ್ಲಿ ಪರಿಶಿಷ್ಟರ ಅಭಿವೃದ್ಧಿಗಾಗಿ ಮೀಸಲಿದ್ದ 187 ಕೋಟಿ ರೂ. ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ಇದು ಕಾಂಗ್ರೆಸ್‌ಸರ್ಕಾರದ ಭ್ರಷ್ಟಾಚಾರಕ್ಕೆ ನೀಡಿದ ಕೈಗನ್ನಡಿ ಎಂದು ಅವರು ಆರೋಪಿಸಿದರು.

ಎಲ್ಲಾ ಜಿಲ್ಲೆಗಳ ನಿಗಮದಿಂದ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ತೆಗೆದುಕೊಂಡು ಪರಿಶಿಷ್ಟರ ಅಭಿವೃದ್ಧಿಗೆ ಕುತ್ತು ತರಲಾಗಿದೆ. ಅಧಿಕಾರಿಗಳ ಮೇಲೆ ಒತ್ತಡ ತಂದು ನಿಗಮದಿಂದ ಹಣವನ್ನು ಪಡೆದು ದುರುಪಯೋಗ ಮಾಡಿಕೊಳ್ಳಲಾಗಿದೆ. ಹೀಗಾಗಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ದುರುಪಯೋಗ ಮಾಡಿಕೊಂಡಿರುವ ಹಾಗೂ ಅಧಿಕಾರಿಯ ಆತ್ಮಹತ್ಯೆಗೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕೂಡಲೇ ಸಮಾಜ ಕಲ್ಯಾಣ ಸಚಿವರು, ಪರಿಶಿಷ್ಟ ವರ್ಗಗಳ ಕಲ್ಯಾ ಸಚಿವರು ರಾಜೀನಾಮೆ ನೀಡಬೇಕು ಎಂದು ಅವರು ಅವರು ಒತ್ತಾಯಿಸಿದರು.

ನಾಯಕ ಜನಾಂಗದ ಹಿತರಕ್ಷಣಾ ವೇದಿಕೆಯ ಪಡುವಾರಹಳ್ಳಿ ರಾಮಕೃಷ್ಣ, ಪ್ರಭಾಕರ್‌ಹುಣಸೂರು, ಶ್ರೀಧರ್‌ ಚಾಮುಂಡಿಬೆಟ್ಟ, ರಾಜು, ಮಾದೇಶ್‌, ಹಿನಕಲ್‌ಚಂದ್ರ, ವಿಜಯ್ ಕುಮಾರ್, ಸುರೇಶ್‌, ರಮೇಶ್, ಎಚ್.ಆರ್. ಪ್ರಕಾಶ್, ರಂಗಸ್ವಾಮಿ, ಪುಟ್ಟರಾಜು, ರವಿ, ಮಂಜುನಾಥ್‌, ಮೂರ್ತಿ, ಮಹದೇವು, ನಂದೀಶ್ ಮೊದಲಾದವರು ಇದ್ದರು.