ವ್ಯವಸ್ಥಿತವಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಸಿ: ಜಿಲ್ಲಾಧಿಕಾರಿ

| Published : Apr 24 2025, 12:00 AM IST

ವ್ಯವಸ್ಥಿತವಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಸಿ: ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ದ್ವಿತೀಯ ಪಿಯುಸಿ ಪರೀಕ್ಷೆ 2 ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ದ್ವಿತೀಯ ಪಿಯುಸಿ ಪರೀಕ್ಷೆ-2 ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ನ್ನು ವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಪರೀಕ್ಷೆ-1 ನಡೆಸಿದಂತೆ ಪರೀಕ್ಷೆ-2 ನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಅವರು ಮಾತನಾಡಿ, ಏಪ್ರಿಲ್, 24 ರಿಂದ ಮೇ, 08 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಯು ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ಇಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 3470 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು.

ವೆಬ್‌ಕಾಸ್ಟಿಂಗ್ ಸಹ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಪ್ರಾಂಶುಪಾಲರು ಇತರರು ಇದ್ದರು.