ಪೋಷಕರ ಸಭೆ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಕ್ಕೆ ಚಾಲನೆ

| Published : Jul 16 2024, 12:34 AM IST

ಪೋಷಕರ ಸಭೆ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಕ್ಕೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳ ಮೊದಲನೇ ಪೋಷಕರ ಸಭೆ ಹಾಗೂ ವಿದ್ಯಾರ್ಥಿಗಳಿಗೆ ವೃತ್ತಿ ಯೋಜನೆ ತರಬೇತಿ ನೀಡಲು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲಾ ಪ್ರಾಂಶುಪಾಲರಾದ ನೀತಾ ಕೆ.ಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಲು ಸತತ ಪರಿಶ್ರಮ ಹಾಗೂ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಹಾಗೂ ಶಾಲೆಯಲ್ಲಿ ನಡೆಸುವ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಶಾಲಾ ಪ್ರಾಂಶುಪಾಲರಾದ ನೀತಾ ಕೆ. ಡಿ ಹೇಳಿದರು.

ಇಲ್ಲಿಯ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ 6 ರಿಂದ 10ನೇ ತರಗತಿಗಳ ವಿದ್ಯಾರ್ಥಿಗಳ ಮೊದಲನೇ ಪೋಷಕರ ಸಭೆ ಹಾಗೂ ವಿದ್ಯಾರ್ಥಿಗಳಿಗೆ ವೃತ್ತಿ ಯೋಜನೆ ತರಬೇತಿ ನೀಡಲು ‘ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಈ ಸಂದರ್ಭ 2023-24 ನೇ ಸಾಲಿನಲ್ಲಿ ಒಂಬತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಖುಶಿ ಕೆ. ಎಂ. ಇವರ ಪೋಷಕರು ‘ವೃತ್ತಿ ಮಾರ್ಗದರ್ಶನ’ ಕ್ಕೆ ಚಾಲನೆ ನೀಡಿದರು.

ಶಾಲಾ ದೈಹಿಕ ಶಿಕ್ಷಕಿ ಶ್ಯಾಮಿಲಿ ಇವರು ವೃತ್ತಿ ತರಬೇತಿ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಹಾಗೆಯೇ ಗಣಕಯಂತ್ರ ಶಿಕ್ಷಕಿ ಸುಶ್ಮಿತಾ ಇವರು 2023-24ನೇಯ ಹಾಗೂ ಪ್ರಸಕ್ತ ಸಾಲಿನಲ್ಲಿ ಇದುವರೆಗೂ ಶಾಲೆಯಲ್ಲಿ ನಡೆಸಿದ ಶೈಕ್ಷಣಿಕ ಚಟುವಟಿಕೆಗಳ ವಿಡಿಯೋ ತುಣುಕನ್ನು ಪೋಷಕರಿಗೆ ತೋರಿಸಿ ತಮ್ಮ ಮಕ್ಕಳ ಉತ್ತಮ ಬೆಳವಣಿಗೆಯ ಬಗ್ಗೆ ತಿಳಿದುಕೊಳ್ಳಲು ಸಹಕರಿಸಿದರು.

ಕಾರ್ಯಕ್ರಮಕ್ಕೆ ಎಲ್ಲ ಪೋಷಕರು, ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ವೃಂದ ಹಾಜರಿದ್ದರು. ಶಾಲಾ ಉಪನಾಯಕಿ ಚಶ್ಮಿ ನಿರೂಪಿಸಿದರು. ಹತ್ತನೇ ತರಗತಿ ವಿದ್ಯಾರ್ಥಿಗಳಾದ ಡಯಾನ ತಂಡದವರು ಪ್ರಾರ್ಥಿಸಿದರು, ಕೃತಿ ಸ್ವಾಗತಿಸಿ, ಚೆಂಗಪ್ಪ ವಂದಿಸಿದರು.