28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸ: ಕಾರಜೋಳ

| Published : Mar 30 2024, 12:49 AM IST

28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸ: ಕಾರಜೋಳ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ ವ್ಯಕ್ತಪಡಿಸಿದರು.

ಹಿರಿಯೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ ವ್ಯಕ್ತಪಡಿಸಿದರು.

ನಗರದ ತೇರುಮಲ್ಲೇಶ್ವರ ಸ್ವಾಮಿ ದೇವಾಲಯಕ್ಕೆ ಶುಕ್ರವಾರ ಸಂಜೆ ಭೇಟಿ ನೀಡಿ ದರ್ಶನ ಪಡೆದ ಅವರು ಸುದ್ಧಿಗಾರರ ಜೊತೆ ಮಾತನಾಡಿದರು. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು ಇಬ್ಬರು ಜಂಟಿಯಾಗಿ ಪ್ರಚಾರ ಮಾಡುವುದರಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬರಲಿದೆ.

ಹೊರಗಿನವರಿಗೆ ಟಿಕೆಟ್ ನೀಡಿರುವುದಿಂದ ತಮ್ಮ ವಿರುದ್ಧ ಜಿಲ್ಲೆಯಲ್ಲಿ ಬಂಡಾಯ ಎದ್ದಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು

ವರಿಷ್ಠರು ನನಗೆ ಟಿಕೆಟ್ ನೀಡಿದ್ದು ಒಂದೆರಡು ದಿನದಲ್ಲಿ ಎಲ್ಲಾ ಸರಿಯಾಗಲಿದೆ. ಜಿಲ್ಲೆಯಲ್ಲಿ ಯಾವುದೇ ಬಂಡಾಯ ಇಲ್ಲ. ಎರಡೂ ಪಕ್ಷಗಳ ನಾಯಕರು, ಕಾರ್ಯಕರ್ತರು ಒಗ್ಗಟ್ಟಾಗಿ ಸೇರಿ ಚುನಾವಣೆ ಎದುರಿಸಿ ಗೆಲುವು ಸಾಧಿಸಲಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ, ಮಾಜಿ ಜಿಲ್ಲಾಧ್ಯಕ್ಷ ಡಿ ಯಶೋಧರ್, ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ್, ಬಿಜೆಪಿ ಮುಖಂಡ ಎನ್ ಆರ್ ಲಕ್ಷ್ಮಿಕಾಂತ್ ಸೇರಿದಂತೆ ಎರಡೂ ಪಕ್ಷದ ಬಹುತೇಕ ಮುಖಂಡರು ಹಾಜರಿದ್ದರು.