ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಪುರಸಭೆಗೆ ನಾಮನಿರ್ದೇಶನಗೊಂಡ ಐವರು ಸದಸ್ಯರು ಶಾಸಕ ಬಿ.ಎಂ.ನರೇಂದ್ರಸ್ವಾಮಿ ಅವರನ್ನು ಅಭಿನಂದಿಸಿದರು.ಸಿದ್ದಾರ್ಥನಗರದ ಎಂ.ಡಿ.ಸಂತೋಷ್, ಪೇಟೆ ಮುಸ್ಲಿಂ ಬ್ಲಾಕ್‌ನ ಐಯೂಬ್ ಪಾಷ, ವಡ್ಡರಕಾಲೋನಿ ಎಂ.ಆನಂದ್ ಕುಮಾರ್, ಮಾರೇಹಳ್ಳಿ ಬಸವರಾಜು ಹಾಗೂ ಪೇಟೆ ಸಣ್ಣಮಲ್ಲೇಗೌಡ ಬೀದಿ ಎಚ್.ಬಸವರಾಜು ಅವರನ್ನು ಪುರಸಭೆಗೆ ನಾಮನಿರ್ದೇಶನ ಮಾಡಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಆದೇಶ ಹೊರಡಿಸಿದ್ದಾರೆ.
ಐವರು ನಾಮನಿರ್ದೇಶನ ಸದಸ್ಯರಿಂದ ತಾಲೂಕಿನ ಪೂರಿಗಾಲಿ ಗ್ರಾಮದಲ್ಲಿ ಅಭಿನಂದನೆ ಸ್ವೀಕರಿಸಿದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ನಿಮ್ಮ ನಿಮ್ಮ ವಾರ್ಡ್ ಗಳಲ್ಲಿ ಜನರ ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಸಲಹೆ ನೀಡಿದರು.ನೂತನ ಸದಸ್ಯ ಎಚ್.ಬಸವರಾಜು ಮಾತನಾಡಿ, ನಮ್ಮ ಸೇವೆಯನ್ನು ಗುರುತಿಸಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಪುರಸಭೆಗೆ ನಾಮನಿರ್ದೇಶನ ಮಾಡಿಸಿದ್ದಾರೆ. ಪಟ್ಟಣದಲ್ಲಿ ಕಾಂಗ್ರೆಸ್ ನನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು. ವಾರ್ಡ್ ಗಳಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.
ಈ ವೇಳೆ ಟಿಎಪಿಸಿಎಂಎಸ್ ನಿರ್ದೇಶಕ ಕೆ.ಜೆ.ದೇವರಾಜು, ಎಂ.ಡಿ.ಸಂತೋಷ್, ಐಯೂಬ್ ಪಾಷ, ಎಂ.ಆನಂದ್ ಕುಮಾರ್, ಮಾರೇಹಳ್ಳಿ ಬಸವರಾಜು ಇದ್ದರು.ನಾಳೆ ವಿಕಲಚೇತನರ ಕ್ರೀಡಾಕೂಟಮಂಡ್ಯ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನ.22 ರಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಜಿಲ್ಲಾ ಪ್ಯಾರಾ ಒಲಂಪಿಕ್ಸ್ ಅಸೋಸಿಯೇಷನ್ ಆಫ್ ಮಂಡ್ಯ ಹಾಗೂ ಜಿಲ್ಲೆಯ ಎಂಆರ್‌ಡಬ್ಲ್ಯೂ. ವಿಆರ್‌ಡಬ್ಲ್ಯೂ. ಯೂಆರ್‌ಡಬ್ಲ್ಯೂ ಒಕ್ಕೂಟ ಆಶ್ರಯದಲ್ಲಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ವಿಕಲಚೇತನರ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ.ನಾಳೆ ಹಲವೆಡೆ ವಿದ್ಯುತ್ ವ್ಯತ್ಯಯ
ಮಂಡ್ಯ: ತಾಲೂಕಿನ ವಿ.ಸಿ.ಫಾರ್ಮ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ನ.22 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿ.ಸಿ.ಫಾರ್ಮ್ , ಶಿವಳ್ಳಿ, ದುದ್ದ, ಬಿ.ಹಟ್ನ, ಬೇವಕಲ್ಲು, ಹುಲಿಕೆರೆ, ಚಂದಗಾಲು, ಹುಲ್ಲೇನಹಳ್ಳಿ, ಹೊಳಲು ಹಾಗೂ ಈ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸೆಸ್ಕ್ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.ಕೆಆರ್‌ಎಸ್ ಗ್ರಾಮದಲ್ಲಿ ಬಾಲ್ಯ ವಿವಾಹಕ್ಕೆ ತಡೆಶ್ರೀರಂಗಪಟ್ಟಣ:
ಬಾಲ್ಯ ವಿವಾಹಕ್ಕೆ ಮುಂದಾಗಿದ್ದ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ತಾಲೂಕಿನ ಕೆಆರ್‌ಎಸ್ ಗ್ರಾಮಕ್ಕೆ ಸ್ಥಳಕ್ಕೆ ತೆರಳಿ ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.ಕೆಆರ್‌ಎಸ್ ಪೊಲೀಸ್ ಠಾಣಾ ವ್ಯಾಪ್ತಿಯ ಮಜ್ಜಿಗೆಪುರ ರಸ್ತೆ, ಕೆಆರ್‌ಎಸ್ ಗ್ರಾಮದ 17 ವರ್ಷದ ಬಾಲಕಿಯನ್ನು ಕೆಆರ್‌ಎಸ್ ಪಕ್ಕದ ಗ್ರಾಮ ಹೊಸಉಂಡವಾಡಿ ಗ್ರಾಮದ ಯುವಕನೊಂದಿಗೆ ನ.21ರ ಗುರುವಾರ ಮದುವೆ ನಿಶ್ವಯವಾಗಿ ವಿವಾಹ ಆಹ್ವಾನ ಪತ್ರಿಕೆ ಸಹ ಮುದ್ರಿಸಲಾಗಿತ್ತು.
ಈ ಕುರಿತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಹಾಗೂ ಸ್ಥಳೀಯ ಅಧಿಕಾರಿಗಳು ಬಾಲ್ಯ ವಿವಾಹ ನಿಷೇಧ ಕಾಯಿದೆ ಮತ್ತು ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ತಿಳಿಹೇಳಿ ಮಗಳಿಗೆ 18 ವರ್ಷ ತುಂಬುವವರೆಗೆ ವಿವಾಹ ಮಾಡುವುದಿಲ್ಲ ಎಂದು ತಾಯಿಯಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು, ಎಚ್ಚರಿಕೆ ನೀಡಿ ಬಾಲ್ಯ ವಿವಾಹ ತಡೆದಿರುವುದಾಗಿ ಬಿಇಒ ಮಹೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.