ಸಾರಾಂಶ
ಹೈನುಗಾರಿಕೆ ಗ್ರಾಮೀಣ ಪ್ರದೇಶದ ರೈತರ ಆರ್ಥಿಕ ಬಲವರ್ಧನೆಗೆ ಸಹಕಾರಿಯಾಗಿದೆ. ಹಾಗಾಗಿ ಹೆಚ್ಚಿನ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಗ್ರಾಪಂ ಸದಸ್ಯರು ಸಹ ಹೈನುಗಾರಿಕೆಯಲ್ಲಿ ತೊಡಗಿಕೊಂಡು ಹಾಲು ಉತ್ಪಾದನೆಯಲ್ಲಿ ತಾಲೂಕನ್ನು ಜಿಲ್ಲೆಯಲ್ಲಿಯೇ ಮೊದಲ ಸ್ಥಾನಕ್ಕೆ ತೆಗೆದುಕೊಂಡು ಹೋಗಲು ಸಹಕಾರ ನೀಡಬೇಕು.
ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನಿಂದ ಮನ್ಮುಲ್ ನಿರ್ದೇಶಕರಾಗಿ ಆಯ್ಕೆಯಾದ ಗ್ರಾಪಂ ಸದಸ್ಯ ಸಿ.ಶಿವಕುಮಾರ್ ಅವರನ್ನು ಚಿನಕುರಳಿ ಗ್ರಾಪಂನಿಂದ ಎಲ್ಲಾ ಸದಸ್ಯರು ಅಭಿನಂದಿಸಿದರು.ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಿ.ಶಿವಕುಮಾರ್, ಹೈನುಗಾರಿಕೆ ಗ್ರಾಮೀಣ ಪ್ರದೇಶದ ರೈತರ ಆರ್ಥಿಕ ಬಲವರ್ಧನೆಗೆ ಸಹಕಾರಿಯಾಗಿದೆ. ಹಾಗಾಗಿ ಹೆಚ್ಚಿನ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಗ್ರಾಪಂ ಸದಸ್ಯರು ಸಹ ಹೈನುಗಾರಿಕೆಯಲ್ಲಿ ತೊಡಗಿಕೊಂಡು ಹಾಲು ಉತ್ಪಾದನೆಯಲ್ಲಿ ತಾಲೂಕನ್ನು ಜಿಲ್ಲೆಯಲ್ಲಿಯೇ ಮೊದಲ ಸ್ಥಾನಕ್ಕೆ ತೆಗೆದುಕೊಂಡು ಹೋಗಲು ಸಹಕಾರ ನೀಡಬೇಕು ಎಂದರು.
ಈ ವೇಳೆ ಜಿಪಂ ಮಾಜಿ ಸದಸ್ಯ ಸಿ.ಅಶೋಕ್, ಗ್ರಾಪಂ ಅಧ್ಯಕ್ಷೆ ಗಾಯಿತ್ರಿ, ಉಪಾಧ್ಯಕ್ಷ ಶ್ರೀನಿವಾಸ್, ಮಾಜಿ ಅಧ್ಯಕ್ಷರಾದ ಮಹಮದ್ ಇಮ್ತಿಯಾಜ್ ಪಾಷ, ಕೆ.ಎಸ್.ಪುಟ್ಟಸ್ವಾಮಿ, ಸದಸ್ಯರಾದ ಸಿ.ಎ.ಲೋಕೇಶ್, ಪರಮೇಶ್, ಕೃಷ್ಣೇಗೌಡ, ನಾಗೇಗೌಡ, ದೇವರಾಜ, ನರಸಿಂಹಶೆಟ್ಟಿ, ವಸಂತೇಗೌಡ, ಸತೀಶ್, ಮಂಜುಳಮಹದೇವು, ದಿವ್ಯ, ಇಂದ್ರಾಣಿ, ಕಮಲಮ್ಮ, ಸುಮ, ಜ್ಯೋತಿ, ಜಯಶೀಲ, ಶ್ವೇತ, ಸುಶೀಲಮ್ಮ, ಧನಲಕ್ಷ್ಮಿ, ಶಿವಮ್ಮ, ಪಿಡಿಒ ಆರತಿಕುಮಾರ್, ಕಾರ್‍ಯದರ್ಶಿ ವಿಶ್ವನಾಥಚಾರಿ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.