ಚಂಡಿಗಢ ಮುಖ್ಯ ಕಾರ್ಯದರ್ಶಿ ರಾಜೇಶ್‌ ಪ್ರಸಾದ್‌ಗೆ ಅಭಿನಂದನೆ

| Published : Nov 18 2025, 02:00 AM IST

ಚಂಡಿಗಢ ಮುಖ್ಯ ಕಾರ್ಯದರ್ಶಿ ರಾಜೇಶ್‌ ಪ್ರಸಾದ್‌ಗೆ ಅಭಿನಂದನೆ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಚಂಡೀಗಢ ಮುಖ್ಯ ಕಾರ‍್ಯದರ್ಶಿ ರಾಜೇಶ್ ಪ್ರಸಾದ್ ಅವರಿಗೆ ಅಭಿನಂದನ ಕಾರ‍್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿಜೀವನದಲ್ಲಿ ಶಿಸ್ತು, ಪ್ರಬಲ ಇಚ್ಛೆ, ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ. ಶಿಕ್ಷಣ ಬದುಕು ಬದಲಾಯಿಸುವ ಸಾಧನ, ಆದರೆ ಮೌಲ್ಯವಿಲ್ಲದ ಶಿಕ್ಷಣಕ್ಕೆ ಬೆಲೆ ಇಲ್ಲ ಎಂದು ಚಂಡೀಗಢ ಮುಖ್ಯ ಕಾರ‍್ಯದರ್ಶಿ ರಾಜೇಶ್ ಪ್ರಸಾದ್ ಹೇಳಿದ್ದಾರೆ.ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಅಭಿನಂದನ ಕಾರ‍್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಉತ್ತಮ ಆಚಾರ, ವಿಚಾರ, ಬುದ್ದಿ, ನಡತೆಯನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮಾತ್ರವಲ್ಲ ಅವುಗಳನ್ನು ಮುಂದಿನ ಪೀಳಿಗೆಗೂ ವರ್ಗಾಯಿಸಬೇಕು. ನಿದ್ದೆಗೆಡಿಸುವಂಥ ಕನಸು ಕಂಡು, ಸಾಕಾರಗೊಳಿಸಲು ಪರಿಶ್ರಮಪಡಬೇಕು ಎಂದರು.ಅಭ್ಯಾಗತರಾಗಿದ್ದ ಸಂಸದ ಕೋಟ ಶ್ರೀನಿವಾಸ ಪೂಜಾರಿ ವ್ಯಕ್ತಿಗೆ ಹೊರಗೆ ಎಷ್ಟೇ ಸನ್ಮಾನ, ಗೌರವಾದರಗಳು ಲಭಿಸಿದರೂ ಹುಟ್ಟೂರಿನ ಸನ್ಮಾನ ಎಲ್ಲಕ್ಕಿಂತ ಮಿಗಿಲಾದುದು. ಹಿಂದುಳಿದ ಸಮಾಜದ ವ್ಯಕ್ತಿಗಳು ಉನ್ನತ ಹುದ್ದೆಗೇರುವುದು ಸುಲಭದ ಮಾತಲ್ಲ. ಅಂಥದ್ದರಲ್ಲಿ ಮರಾಟಿ ಸಮುದಾಯದ ರಾಜೇಶ್ ಪ್ರಸಾದ್ ಉನ್ನತ ಹುದ್ದೆಗೇರುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.ಎಂಜಿಎಂ ಕಾಲೇಜಿನ ವಿಶ್ವಸ್ಥ ಮಂಡಳಿ ಅಧ್ಯಕ್ಷ ಟಿ.ಸತೀಶ್ ಯು. ಪೈ ಅಧ್ಯಕ್ಷತೆ ವಹಿಸಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ರಘುಪತಿ ಭಟ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಪಟ್ಲ ಸತೀಶ್ ಶೆಟ್ಟಿ, ಎಂಜಿಎಂ ಕಾಲೇಜು ಪ್ರಾಂಶುಪಾಲೆ ಪ್ತೊ.ವನಿತಾ ಮಯ್ಯ, ಸಂಧ್ಯಾ ಕಾಲೇಜು ಪ್ರಾಂಶುಪಾಲ ಪ್ರೊ. ದೇವಿದಾಸ್ ಎಸ್. ನಾಯ್ಕ ಇದ್ದರು.ಅಭಿನಂದನ ಸಮಿತಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಸ್ತಾವಿಕವಾಗಿ ಮಾತನಾಡಿದರು. ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿನಂದನಾ ಪತ್ರ ವಾಚಿಸಿದರು. ಪೂರ್ಣಿಮಾ ಸುರೇಶ್ ನಿರೂಪಿಸಿದರು. ಎಚ್. ರಾಜೇಶ್ ಪ್ರಸಾದ್ ಮತ್ತು ಉಷಾ ದಂಪತಿಯನ್ನು ಸನ್ಮಾನಿಸಲಾಯಿತು.