ಸಾರಾಂಶ
ಜೂನ್ ತಿಂಗಳಿನಲ್ಲಿ ಬಿಜೆಪಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 399 ಗ್ರಾ.ಪಂ. ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಹಾಗೂ ಅಭಿವೃದ್ಧಿ ಯೋಜನೆಗಳಲ್ಲಿ ಮಲತಾಯಿ ಧೋರಣೆ ಖಂಡಿಸಿ ನಡೆಸಿದ ಪ್ರತಿಭಟನೆಯಿಂದ ವಿಚಲಿತರಾದ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ತಮ್ಮದೇ ಸರ್ಕಾರ ಆಡಳಿತ ಮಾಡುತ್ತಿದೆ ಎಂಬುದನ್ನೇ ಮರೆತಂತೆ ಪ್ರತಿಭಟನೆಯ ನಾಟಕ ವಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ದಿನೇಶ್ ಅಮೀನ್ ವ್ಯಂಗ್ಯವಾಡಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಕಾಂಗ್ರೆಸ್ ಮುಖಂಡರು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ತಮ್ಮದೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪರಿಸ್ಥಿತಿಗೆ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ವ್ಯಂಗ್ಯವಾಡಿದ್ದಾರೆ.ಜೂನ್ ತಿಂಗಳಿನಲ್ಲಿ ಬಿಜೆಪಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 399 ಗ್ರಾ.ಪಂ. ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಹಾಗೂ ಅಭಿವೃದ್ಧಿ ಯೋಜನೆಗಳಲ್ಲಿ ಮಲತಾಯಿ ಧೋರಣೆ ಖಂಡಿಸಿ ನಡೆಸಿದ ಪ್ರತಿಭಟನೆಯಿಂದ ವಿಚಲಿತರಾದ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ತಮ್ಮದೇ ಸರ್ಕಾರ ಆಡಳಿತ ಮಾಡುತ್ತಿದೆ ಎಂಬುದನ್ನೇ ಮರೆತಂತೆ ಪ್ರತಿಭಟನೆಯ ನಾಟಕ ವಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಅವರು ಹೇಳಿದ್ದಾರೆ.ಜನರ ಸಮಸ್ಯೆಗಳ ಪರಿಹಾರದ ಬಗ್ಗೆ ಕಿಂಚಿತ್ ಕಾಳಜಿ ಇದ್ದರೆ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಗ್ರಾಮ ಪಂಚಾಯಿತಿ 9/11 ಸಮಸ್ಯೆಗಳ ಬಗ್ಗೆ ತಮ್ಮದೇ ಸರಕಾರದ ಸಚಿವರ ಮೂಲಕ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವ ಬದಲು ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆಯ ನಾಟಕವಾಡಿ ಜನರಿಗೆ ತಪ್ಪು ಸಂದೇಶ ನೀಡಲು ಹೊರಟರೆ ಉಡುಪಿಯ ಪ್ರಜ್ಞಾವಂತ ಜನತೆ ಇದನ್ನೆಲ್ಲಾ ನಂಬುವುದಿಲ್ಲ ಎಂದು ದಿನೇಶ್ ಅಮೀನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.