ಕೊರಟಗೆರೆ ವಿಧಾನಸಭಾ ಕ್ಷೇತ್ರದ ಮತದಾರರ ಆಶಿರ್ವಾದದಿಂದ ೨ನೇ ಬಾರಿಗೆ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ.ಜಿ.ಪರಮೇಶ್ವರ ರವರಿಗೆ ಕ್ಷೇತ್ರದ ಜನರಿಂದ ಬೃಹತ್ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವಥನಾರಾಯಣ ತಿಳಿಸಿದರು.
ಕನ್ನಡಪ್ರಭ ವಾರ್ತೆ ಕೊರಟಗೆರೆ
ಕೊರಟಗೆರೆ ವಿಧಾನಸಭಾ ಕ್ಷೇತ್ರದ ಮತದಾರರ ಆಶಿರ್ವಾದದಿಂದ ೨ನೇ ಬಾರಿಗೆ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ.ಜಿ.ಪರಮೇಶ್ವರ ರವರಿಗೆ ಕ್ಷೇತ್ರದ ಜನರಿಂದ ಬೃಹತ್ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವಥನಾರಾಯಣ ತಿಳಿಸಿದರು.ಪಟ್ಟಣದ ರಾಜೀವಭವನದಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಅಭಿಮಾನಿಗಳಿಂದ ನಡೆದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು.
೧೪ ರ ಭಾನುವಾರದಂದು ಬೆಳ್ಳಿಗೆ ೧೦ ಗಂಟೆಗೆ ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕ್ಷೇತ್ರ ಶಾಸಕರಾದ ಡಾ.ಜಿ.ಪರಮೇಶ್ವರ್, ಎರಡನೇ ಬಾರಿಗೆ ಉಪಮುಖ್ಯಮಂತ್ರಿಗಳಾಗಿ ರಾಜ್ಯದ ಅಧಿಕಾರ ವಹಿಸಿಕೊಂಡ ಹಿನ್ನಲೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಎಲ್ಲಾ ಪದಾಧಿಕಾರಿಗಳು ತಾಲೂಕಿನ ವಿವಿಧ ಸಂಘಟನೆಗಳಿಂದ, ಅಭಿಮಾನಿಗಳಿಂದ ಮತ್ತು ಮತದಾರರಿಂದ ಬೃಹತ್ ಅಭಿನಂದನಾ ಸಮಾರಂಭವನ್ನು ಏರ್ಪಡಿಸಿದ್ದು ಎಲ್ಲಾ ಮತಬಾಂಧವರು ಹಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದ್ದಾರೆ.ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಮಾತನಾಡಿ, ಭಾನುವಾರದಂದು ಬೆಳಿಗ್ಗೆ ಡಾ.ಜಿ.ಪರಮೇಶ್ವರ ರವರನ್ನು ಸಮಾರಂಭಕ್ಕೆ ಮುಂಚಿತವಾಗಿ ಹೂವಿನ ರಥದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ಟ್ ನಿಲ್ದಾಣದಿಂದ ಪದವಿ ಪೂರ್ವ ಕಾಲೇಜು ಮೈದಾನದವರೆಗೆ ವಿವಿಧ ಜಾನಪದ ತಂಡಗಳು, ಕುಂಭ ಕಳಶಗಳು ಹೊತ್ತು ಸಾವಿರಾರು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮತದಾರರಿಂದ ಬೃಹತ್ ಮೆರವಣಿಗೆಯನ್ನು ನಡೆಸಲಾಗುವುದು ಎಂದರು.
ಕೆ.ಪಿ.ಸಿ.ಸಿ ಸದಸ್ಯ ಎ.ಡಿ.ಬಲರಾಮಯ್ಯ ಮಾತನಾಡಿ, ಡಾ.ಜಿ.ಪರಮೇಶ್ವರ ಕೊರಟಗೆರೆ ಕ್ಷೇತಕ್ಕೆ ಬಂದು ಶಾಸಕರಾದ ಮೇಲೆ ೮ ವರ್ಷಗಳ ಅವಧಿ ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ, ಎರಡು ಭಾರಿ ಉಪಮಖ್ಯಮಂತ್ರಿಗಳು, ೩ ಬಾರಿ ಗೃಹ ಸಚಿವರು ಕೆಲಸ ಮಾಡಿದ್ದು, ಕೊರಟಗೆರೆ ಮತಬಾಂಧವರು ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದಾರೆ ಎಂದರು.ಕಾಂಗ್ರೆಸ್ ಮುಖಂಡರಾದ ಮಹಾಲಿಂಗಪ್ಪ ಮಾತನಾಡಿ ಅಭಿನಂದನಾ ಸಮಾರಂಭಕ್ಕೆ ಬರುವ ಸಮಸ್ತ ಮತಬಾಂಧವರಿಗೆ ಉಪಹಾರದ ವ್ಯವಸ್ಥೆಯನ್ನು ಸಹ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ, ನಮ್ಮ ಕ್ಷೇತ್ರದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದರು.
ಸುದ್ದಿಗೋಷ್ಠಿಯಲ್ಲಿ ಮಹಿಳಾ ಅಧ್ಯಕ್ಷೆ ಜಯಮ್ಮ, ಮುಖಂಡರುಗಳಾದ ವೆಂಕಟೇಶ್‌ಮೂರ್ತಿ, ಎಲ್.ರಾಜಣ್ಣ, ರುದ್ರಪ್ರಸಾದ್, ನರಸಮ್ಮ ನರಸಿಂಹಮೂರ್ತಿ, ಸೈಯದ್‌ಸೈಪುಲ್ಲಾ, ಟಿ.ಸಿ.ರಾಮಣ್ಣ, ಹೊಳವನಹಳ್ಳಿಜಯರಾಮ್, ವಿನಯ್‌ಕುಮಾರ್, ಗಟ್ಲಹಳಿಕುಮಾರ್, ಮಕ್ತಿಯಾರ್, ಅರವಿಂದ್, ಲಕ್ಷಮ್ಮ, ಮಲ್ಲಣ್ಣ, ಹನುಮಂತರಾಜು, ಬೈರೇಶ್, ದೀಪಕ್, ರಘುವೀರ್, ಸೂಪಿಯಾನ್, ದೇವರಾಜು, ಸೋಮೇಶ್, ಭರತ್, ರವಿ, ರಮೇಶ್ ಸೇರಿದಂತೆ ಇತರರು ಹಾಜರಿದ್ದರು.