ವಕೀಲ ಶಿವಣ್ಣೇಗೌಡರಿಗೆ ಅಭಿನಂದನೆ

| Published : Jul 07 2025, 11:48 PM IST

ಸಾರಾಂಶ

ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಹಿರಿಯ ವಕೀಲ ಶಿವಣ್ಣೇಗೌಡರಿಗೆ ಮೈಸೂರು ಜಿಲ್ಲಾ ವಕೀಲರಿಂದ ಸನ್ಮಾನಿಸಲಾಯಿತು.

ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಹಿರಿಯ ವಕೀಲ ಶಿವಣ್ಣೇಗೌಡರಿಗೆ ಮೈಸೂರು ಜಿಲ್ಲಾ ವಕೀಲರಿಂದ ಸನ್ಮಾನಿಸಲಾಯಿತು.

ನಗರದ ಜೆ.ಎಲ್.ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಣ್ಣೇಗೌಡರಿಗೆ ಮೈಸೂರು ಪೇಟ ತೊಡಿಸಿ ಗುಲಾಬಿ ಹಾರ ಹಾಕಿ ಮೈಸೂರು ಅರಮನೆಯ ಮಾದರಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮವನ್ನು ರಾಜ್ಯ ವಕೀಲರ ಪರಿಷತ್ ಮಾಜಿ ಅಧ್ಯಕ್ಷ ಸಿ.ಎಂ. ಜಗದೀಶ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್. ಲೋಕೇಶ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಹಿರಿಯ ವಕೀಲ ಹಾಗೂ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ಗೌರವ ಸಂಪಾದಕ ಎಚ್.ಎನ್. ವೆಂಕಟೇಶ್, ಎಂ.ಡಿ. ಹರೀಶ್ ಕುಮಾರ್ ಹೆಗ್ಡೆ ಭಾಗವಹಿಸಿದ್ದರು.

ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಎಂ. ಮಹದೇವಸ್ವಾಮಿ, ಮಾಜಿ ಕಾರ್ಯದರ್ಶಿ ಎಸ್. ಉಮೇಶ್, ಹಾಲಿ ಕಾರ್ಯದರ್ಶಿ ಸುಧೀರ್, ಉಪಾಧ್ಯಕ್ಷ ಚಂದ್ರಶೇಖರ, ಹಿರಿಯ ಪತ್ರಕರ್ತ ಎಂ.ಬಿ. ಮರಮ್‌ ಕಲ್ ಸೇರಿ ಹಲವರು ಪಾಲ್ಗೊಂಡಿದ್ದರು.