ಅವಿರೋಧ ಆಯ್ಕೆ ಶ್ರಮಿಸಿದ ಶಾಸಕ ಯಶವಂತರಾಯಗೌಡ ಪಾಟೀಲಗೆ ಅಭಿನಂದನೆ

| Published : Jun 20 2024, 01:08 AM IST

ಅವಿರೋಧ ಆಯ್ಕೆ ಶ್ರಮಿಸಿದ ಶಾಸಕ ಯಶವಂತರಾಯಗೌಡ ಪಾಟೀಲಗೆ ಅಭಿನಂದನೆ
Share this Article
  • FB
  • TW
  • Linkdin
  • Email

ಸಾರಾಂಶ

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾದ ನಂತರ ಶಾಸಕ ಯಶವಂತರಾಯಗೌಡ ಪಾಟೀಲ ಅವರನ್ನು ಭೇಟಿಯಾಗಿ ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಇಂಡಿ

ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನಮ್ಮನ್ನು ಅವಿರೋಧವಾಗಿ ಆಯ್ಕೆಯಾಗಲು ಕಾರಣಿಭೂತರಾದ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಅಭಿನಂದಿಸುವುದಾಗಿ ಹೊರ್ತಿ ಗ್ರಾಮದ ರೇಷ್ಮಾ ಪೂಜಾರಿ ಹಾಗೂ ನಂದರಗಿ ಗ್ರಾಮದ ಸಂತೋಷ ಪಾಟೀಲ ಹೇಳಿದರು.ಅವರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾದ ನಂತರ ಶಾಸಕ ಯಶವಂತರಾಯಗೌಡ ಪಾಟೀಲ ಅವರನ್ನು ಭೇಟಿಯಾಗಿ ಸನ್ಮಾನಿಸಿ ಮಾತನಾಡಿದರು.

ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ಈ ಹಿಂದೆ ವಿಜಯಪುರ ಹಾಗೂ ಬಾಗಲಕೋಟೆ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ ನಮ್ಮ ಭಾಗದ ಸಂಭಾಜಿರಾವ ಮಿಸಾಳೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ ಈ ಭಾಗಕ್ಕೆ ನ್ಯಾಯ ತಂದು ಕೊಟ್ಟಿದ್ದಾನೆ. ಬಾಗಲಕೋಟೆ, ವಿಜಯಪುರ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಮನವೊಲಿಸಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದೇನೆ. ಸಾಧ್ಯವಾದಷ್ಟು ಈ ಭಾಗಕ್ಕೆ ರಾಜಕೀಯ, ಸಹಕಾರಿ ಸಂಘಗಳ ಮುಖ್ಯಸ್ಥರ ಸ್ಥಾನಮಾನ ದೊರಕಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ನಮ್ಮ ಭಾಗದಿಂದ ಇರ್ವರು ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ಇರ್ವರು ಉತ್ತಮ ಆಡಳಿತ ಮಾಡುವುದರ ಮೂಲಕ ಒಕ್ಕೂಟದಿಂದ ಈ ಭಾಗಕ್ಕೆ ಅನುಕೂಲ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು.ಮಹಾದೇವ ಗಡ್ಡದ, ರೇಷ್ಮಾ ಪೂಜಾರಿ, ಸಂತೋಷ ಪಾಟೀಲ ಮೊದಲಾದವರು ಈ ಸಂದರ್ಭದಲ್ಲಿ ಇದ್ದರು.