ಭಾರತೀಯ ಆಡಳಿತ ಸೇವೆ ಅಧಿಕಾರಿಯಾಗಿ ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾಗಿ ಹಾಗೂ ಕೆಎಸ್‌ಎಫ್‌ಸಿ ವ್ಯವಸ್ಥಾಪಕ ನಿರ್ದೇಶಕರಾ ನಿವೃತ್ತರಾದ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಕಾರ್ಕಳ ತಾಲೂಕಿನ ಹಿರ್ಗಾನ-ಲಕ್ಷ್ಮೀಪುರದಲ್ಲಿರುವ ಶ್ರೀ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಅಭಿನಂದನಾ ಸಮಾರಂಭ ನಡೆಯಿತು.

ಕಾರ್ಕಳ: ಭಾರತೀಯ ಆಡಳಿತ ಸೇವೆ ಅಧಿಕಾರಿಯಾಗಿ ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾಗಿ ಹಾಗೂ ಕೆಎಸ್‌ಎಫ್‌ಸಿ ವ್ಯವಸ್ಥಾಪಕ ನಿರ್ದೇಶಕರಾ ನಿವೃತ್ತರಾದ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಕಾರ್ಕಳ ತಾಲೂಕಿನ ಹಿರ್ಗಾನ-ಲಕ್ಷ್ಮೀಪುರದಲ್ಲಿರುವ ಶ್ರೀ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಅಭಿನಂದನಾ ಸಮಾರಂಭ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಮಾತನಾಡಿ, ನಿವೃತ್ತಿ ಎಂದರೆ ಸೇವೆಯಿಂದ ಬಿಡುಗಡೆಯಲ್ಲ, ಅದು ಸೇವೆಯ ಸ್ವರೂಪದಲ್ಲಿನ ಬದಲಾವಣೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾಜಿ ಐಎಎಸ್ ಅಧಿಕಾರಿ ಸದಾಶಿವ ಪ್ರಭು ಅವರು, ತಾವು ಯೋಧನಾಗಿ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ದಿನಗಳನ್ನು ಸ್ಮರಿಸಿದರು. ಕ್ಯಾಂಪ್ಕೋ ಅಧ್ಯಕ್ಷ ಹಾಗೂ ಸರಸ್ವತಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಪುತ್ತೂರು ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಉತ್ತಮ ಆದರ್ಶಗಳು, ಧಾರ್ಮಿಕ ಚಟುವಟಿಕೆಗಳು, ಸಾಂಸ್ಕೃತಿಕ ಮೌಲ್ಯಗಳ ಬೆಳವಣಿಗೆ ಹಾಗೂ ದೇಶಪ್ರೇಮವನ್ನು ಬೆಳೆಸುವ ಕಾರ್ಯಗಳು ನಿರಂತರವಾಗಿ ನಡೆಯುತ್ತಿ ಎಂದರು.

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಮಾತನಾಡಿದರು.ಉದ್ಯಮಿ ಎಂ.ಎನ್. ನಾಯಕ್, ವಾಸುದೇವ ಕೃಷ್ಣ ನಾಯಕ್ ಭೈರಂಪಳ್ಳಿ, ಮಾಜಿ ಮೊಕ್ತೇಸರ ಅಶೋಕ್ ನಾಯಕ್ ಮತ್ತಿತರರು ಪಾಲ್ಗೊಂಡರು.ಬೆಂಗಳೂರು ಸಪ್ತಪದಿ ವಿವಾಹ ಕೇಂದ್ರ ವತಿಯಿಂದ ಸದಾಶಿವ ಪ್ರಭು ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ ಮಾಡಲಾಯಿತು. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ‘ಶಕ್ತಿಯುತ ವ್ಯಕ್ತಿಯ ಹಿಂದೆ; ‘ಶಕ್ತಿಯುತ ಮನಸ್ಸು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನಡೆಯಿತು. ಬೆಂಗಳೂರಿನ ಗ್ರೇಸ್ ಅಕಾಡೆಮಿಯ ಜೀವನ್ ವಿಜ್ಞಾನ ತರಬೇತುದಾರ ಸುಬ್ರಹ್ಮಣ್ಯ ಕುಳೇದು ಉಪನ್ಯಾಸ ನೀಡಿದರು.ನಿತ್ಯಾನಂದ ನಾಯಕ್ ಹಾಗೂ ದೀಪಕ್ ಕಾಮತ್ ಎಳ್ಳಾರೆ ನಿರೂಪಿಸಿದರು. ಭುವನೇಶ್ ಪ್ರಭು, ಪತ್ರಕರ್ತ ಪುಂಡಲಿಕ ಮರಾಠೆ ಮತ್ತು ಎಂ.ಡಿ. ಪ್ರಭು ಸನ್ಮಾನ ಪತ್ರಗಳನ್ನು ವಾಚಿಸಿದರು.