ಸಾರಾಂಶ
ಈ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ನಡೆಯಿತು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಸ್ಥಳೀಯ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ನಡೆಯಿತು.ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಪ್ರಾಂಶುಪಾಲ ಡಾ. ದೇವರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಕಾಲೇಜು ಆಡಳಿತ ಮಂಡಳಿಯ ಪ್ರಮುಖರಾದ ಜಯವರ್ಧನ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಏಕಾಗ್ರತೆಯಿಂದ ಅಧ್ಯಯನ ಮಾಡಿದರೆ ಜೀವನದ ಗುರಿ ತಲುಪಲು ಸಾಧ್ಯ ಎಂದರು.ಕನ್ನಡ ಭಾರತಿ ಪದವಿ ಕಾಲೇಜು ಪ್ರಾಂಶುಪಾಲ ಕೆ.ಎಸ್. ರುದ್ರಪ್ಪ ಮಾತನಾಡಿ, ಅತ್ಯುತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಕಾಲೇಜಿನ ಪದವಿ ಪೂರ್ವ ಪ್ರಾಂಶುಪಾಲ ಡಾ. ಎನ್.ನಾಗೇಂದ್ರ ಸ್ವಾಮಿ ಪ್ರಾಸ್ತಾವಿಕ ಮಾಹಿತಿ ಒದಗಿಸಿದರು.ಕೊಡಗು ಜಿಲ್ಲೆಗೆ ಕಲಾವಿಭಾಗದಲ್ಲಿ ಎರಡನೇ ಸ್ಥಾನವನ್ನು ಗಳಿಸಿದ ವಿದ್ಯಾರ್ಥಿ ನವನೀಧನ್ ಮತ್ತು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕನ್ನಡ ಭಾಷೆ ವಿಷಯದಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ ವಿದ್ಯಾರ್ಥಿನಿ ಮನ್ವಿತ ಅವರನ್ನು ಇದೇ ಸಂದರ್ಭ ಗುರುತಿಸಲಾಯಿತು.;Resize=(128,128))
;Resize=(128,128))