ಸಾರಾಂಶ
ಮಳವಳ್ಳಿ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಗಣಿತ ವಿಭಾಗದಲ್ಲಿ ಧನ್ಯತಾ ಪ್ರಥಮ, ಜೀವಶಾಸ್ತ್ರ ವಿಭಾಗದಲ್ಲಿ ಪ್ರಿಯಾ ಪ್ರಥಮ ಮತ್ತು ವಿಚಾರ ಗೋಷ್ಠಿಯಲ್ಲಿ ದ್ವಿತೀಯ ಸ್ಥಾನವನ್ನು ಪುಣ್ಯಶ್ರೀ ಪಡೆದುಕೊಂಡರು.
ಕನ್ನಡಪ್ರಭ ವಾರ್ತೆ ಹಲಗೂರು
ತಾಲೂಕು ಮಟ್ಟದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಜೆ.ಜೆ.ಪಬ್ಲಿಕ್ ಶಾಲೆ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಮಳವಳ್ಳಿ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಗಣಿತ ವಿಭಾಗದಲ್ಲಿ ಧನ್ಯತಾ ಪ್ರಥಮ, ಜೀವಶಾಸ್ತ್ರ ವಿಭಾಗದಲ್ಲಿ ಪ್ರಿಯಾ ಪ್ರಥಮ ಮತ್ತು ವಿಚಾರ ಗೋಷ್ಠಿಯಲ್ಲಿ ದ್ವಿತೀಯ ಸ್ಥಾನವನ್ನು ಪುಣ್ಯಶ್ರೀ ಪಡೆದುಕೊಂಡರು.
ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿಯೂ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ 100 ಮೀಟರ್ ಓಟ, ಗುಂಡು ಎಸೆತ, ಮತ್ತು ಉದ್ದ ಜಿಗಿತದಲ್ಲಿ ಮಹಮ್ಮದ್ ಶಾಹಿದ್ ಪ್ರಥಮ, 200 ಮೀಟರ್ ಓಟ ಪುನೀತ್ ತೃತೀಯ , ಬಾಲಕಿಯರ ತಂಡ ಥ್ರೋಬಾಲ್ ದ್ವಿತೀಯ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಾದ ಚಂಪಕ ಕೆ.ಎಸ್.ಉದ್ದ ಜಿಗಿತದಲ್ಲಿ ಪ್ರಥಮ, ಮೊಹಮ್ಮದ್ ಅಫನ್ ತ್ರಿವಿಧ ಜಿಗಿತದಲ್ಲಿ ಪ್ರಥಮ, ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದರು.ಈ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾವತಿಯಿಂದ ಶಾಲೆ ಸಂಸ್ಥಾಪಕ ಸೋಮಶೇಖರ್ ಮತ್ತು ಪ್ರಾಂಶುಪಾಲರಾದ ಲಲಿತಾಂಬ ಸೋಮಶೇಖರ್ ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದೆ.
ಮಾಂಡವ್ಯ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಶಸ್ತಿ
ಕನ್ನಡಪ್ರಭ ವಾರ್ತೆ ಮಂಡ್ಯನಗರದ ಕಲ್ಲಹಳ್ಳಿ ಬಡಾವಣೆಯಲ್ಲಿರುವ ಮಾಂಡವ್ಯ ಹಿರಿಯ ಪ್ರಾಥಮಿಕ ಶಾಲೆಗೆ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಲಭಿಸಿದೆ. ನಗರದ ಶಂಕರಪುರ ಸರ್ಕಾರಿ ಶಾಲೆಯಲ್ಲಿ ನಡೆದ ೨೦೨೪-೨೫ನೇ ಸಾಲಿನ ಮಂಡ್ಯ-೧ ಕ್ಲಸ್ಟರ್ ಮಟ್ಟದ ಕಿರಿಯ-ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯ ಬಹುತೇಕ ವಿಭಾಗಗಳಲ್ಲಿ ಭಾಗವಹಿಸಿದ್ದ ಮಾಂಡವ್ಯ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ವಿದ್ಯಾಭಾರತಿ ಸಂಸ್ಥೆಯ ಅಧ್ಯಕ್ಷ ಪ್ರೊ. ಬಿ.ಶಿವಲಿಂಗಯ್ಯ, ಕಾರ್ಯದರ್ಶಿ ಡಾ.ಮೀರಾ ಶಿವಲಿಂಗಯ್ಯ ಅವರು ಅಭಿನಂದಿಸಿದರು.ಈ ಸಂದರ್ಭದಲ್ಲಿ ಕೆನಡಾ ದೇಶದಿಂದ ಆಗಮಿಸಿದ ನಾನಿಕ್ ಲಖಾನಿ, ಚಂದ್ರ ಲಖಾನಿ, ಪ್ರಾಂಶುಪಾಲೆ ಸರೋಜ, ಮುಖ್ಯಶಿಕ್ಷಕಿ ಸುನೀತಾ ಹಾಜರಿದ್ದರು.೧೭ಕೆಎಂಎನ್‌ಡಿ-೫
ಕ್ಲಸ್ಟರ್ ಮಟ್ಟದ ಕಿರಿಯ-ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ಮಾಂಡವ್ಯ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ವಿದ್ಯಾಭಾರತಿ ಸಂಸ್ಥೆಯ ಅಧ್ಯಕ್ಷ ಪ್ರೊ. ಬಿ.ಶಿವಲಿಂಗಯ್ಯ, ಕಾರ್ಯದರ್ಶಿ ಡಾ. ಮೀರಾ ಶಿವಲಿಂಗಯ್ಯ ಅವರು ಅಭಿನಂದಿಸಿದರು.