ಕ್ರೀಡಾಕೂಟ ವಿಜೇತರಿಗೆ ಅಭಿನಂದನೆ

| Published : Jun 02 2024, 01:45 AM IST

ಸಾರಾಂಶ

ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಲೋಕೋಪಯೋಗಿ ಇಲಾಖೆ ಭರತ್ ಕುಮಾರ್ ಹಾಗೂ ಆರೋಗ್ಯ ಇಲಾಖೆ ರಘುಪತಿ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್‌ ನಲ್ಲಿ ಪ್ರಥಮ,

ಕೊಪ್ಪ: ಮೇ ೩೦ ಮತ್ತು ೩೧ರಂದು ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಲೋಕೋಪಯೋಗಿ ಇಲಾಖೆ ಭರತ್ ಕುಮಾರ್ ಹಾಗೂ ಆರೋಗ್ಯ ಇಲಾಖೆ ರಘುಪತಿ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್‌ ನಲ್ಲಿ ಪ್ರಥಮ, ಶಿಕ್ಷಣ ಇಲಾಖೆಯ ಗಂಗಾ ಸುಭಾಷ್ ೨೦೦ ಮೀಟರ್ ಓಟದಲ್ಲಿ ಪ್ರಥಮ, ಉದ್ದ ಜಿಗಿತ ಹಾಗೂ ರಿಲೇಯಲ್ಲಿ ಪ್ರಥಮ, ಅಗ್ನಿಶಾಮಕ ಇಲಾಖೆಯ ಗಣೇಶ್ ಗುಂಡು ಎಸೆತದಲ್ಲಿ ಪ್ರಥಮ, ಶಿಕ್ಷಣ ಇಲಾಖೆಯ ಶರತ್ ೧೦೦ ಮತ್ತು ೨೦೦ ಮೀಟರ್ ಓಟ ಹಾಗೂ ರಿಲೇಯಲ್ಲಿ ಪ್ರಥಮ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಭಾಸ್ಕರ್ ಬಿ.ಎನ್ ೧೦೦ ಕೆಜಿ ಪವರ್ ಲಿಫ್ಟಿಂಗ್‌ನಲ್ಲಿ ಪ್ರಥಮ, ಶಿಕ್ಷಣ ಇಲಾಖೆಯ ಪ್ರದೀಪ್ ಕುಮಾರ್ ಬಾಲ್ ಬ್ಯಾಡ್ಮಿಂಟನ್ ನಲ್ಲಿ ಪ್ರಥಮ, ವಾಲಿಬಾಲ್ ದ್ವಿತೀಯ, ಶಾಟ್‌ಪುಟ್‌ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ತಾಲೂಕಿಗೆ ಕೀರ್ತಿ ತಂದ ಸರ್ಕಾರಿ ನೌಕರರಿಗೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.