ಸಾರಾಂಶ
ಕೊಟ್ಟೂರು ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿಗೆ ಸಮೀಪದ ಕೊಟ್ಟೂರು ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.ಅಭಿನಂದನಾ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದಲ್ಲಿ 619 ಅಂಕಗಳಿಸಿ ತೃತೀಯ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಕೂರನ ಇಂಚರ ಕಿಶೋರ್, ಶಾಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಕೇಕಡ ಮೋಕ್ಷ ಬೋಪಣ್ಣ ಹಾಗೂ ತೃತೀಯ ಸ್ಥಾನ ಪಡೆದ ಮಚ್ಚಾಂಡ ಚಕ್ಷ ಕಾವರಮ್ಮ ಅವರನ್ನು ಸನ್ಮಾನಿಸಲಾಯಿತು.ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.ಈ ಸಂದರ್ಭ ಶಿಕ್ಷಕ ವೃಂದ ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪಕ ನಾಟೊಳಂಡ ವಿಜು, ಮುಖ್ಯ ಶಿಕ್ಷಕ ಕುದುಪಜೆ ಕವನ್ ಹಾಗೂ ಶಿಕ್ಷಕ ವೃಂದ ಸಿಬ್ಬಂದಿ ಉಪಸ್ಥಿತರಿದ್ದರು.