ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರ ವಿರುದ್ಧ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸಹಿತ ಕಾಂಗ್ರೆಸಿಗರು ನಡೆಸಿರುವ ಗೂoಡಾಗಿರಿ ಖಂಡನೀಯ ಎಂದು ಎಂದು ಕುತ್ಯಾರು ನವೀನ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ: ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರ ವಿರುದ್ಧ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸಹಿತ ಕಾಂಗ್ರೆಸಿಗರು ನಡೆಸಿರುವ ಗೂoಡಾಗಿರಿ ಖಂಡನೀಯ ಎಂದು ಕುತ್ಯಾರು ನವೀನ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹೀನಾಯ ಘಟನೆ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ. ಸಂವಿಧಾನ ವಿರೋಧಿ ನಡೆಯಿಂದ ರಾಜ್ಯಪಾಲರನ್ನು ಅವಮಾನಿಸಿರುವ ಕಾಂಗ್ರೆಸ್ ಸಚಿವರು ಮತ್ತು ಶಾಸಕರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಗ್ರಹಿಸಿದ್ದಾರೆ.ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಸದನದಲ್ಲಿ ರಾಜ್ಯಪಾಲರ ವಿರುದ್ಧವೇ ಗೂಂಡಾ ವರ್ತನೆ ಪ್ರದರ್ಶಿಸುವ ಮೂಲಕ ಕಾಂಗ್ರೆಸಿಗರು ಸಂವಿಧಾನದ ಆಶಯಗಳಿಗೆ ಅಪಚಾರವೆಸಗಿದ್ದಾರೆ.
ಕಾಂಗ್ರೆಸ್ ಕೇವಲ ರಾಜಕೀಯ ದುರುದ್ದೇಶದಿಂದ ಇಂತಹ ಉದಾತ್ತ ಯೋಜನೆಯನ್ನು ವಿರೋಧಿಸುವ ಜೊತೆಗೆ ಬಡತನ ಮುಕ್ತ ಮತ್ತು ಸ್ವಾವಲಂಬಿ ಗ್ರಾಮಗಳನ್ನು ನಿರ್ಮಿಸುವ ದಿಕ್ಕಿನಲ್ಲಿ ಅಡ್ಡಗಾಲು ಹಾಕುತ್ತಿದೆ. ರಾಜ್ಯದ ಜನತೆ ಕಾಂಗ್ರೆಸ್ಸಿನ ಅಭಿವೃದ್ಧಿ ವಿರೋಧಿ, ಜನ ವಿರೋಧಿ ನೀತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಕಾಂಗ್ರೆಸ್ಸಿಗೆ ಸೂಕ್ತ ಸಮಯದಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.