ಮೀನು ಮಾರಾಟ ಫೆಡರೇಶನ್‌ಗೆ ಜಮೀನು ನೀಡದಂತೆ ಕಾಂಗ್ರೆಸ್ ಮನವಿ

| Published : Nov 19 2025, 01:45 AM IST

ಸಾರಾಂಶ

ಸರ್ಕಾರಿ ಜಾಗವನ್ನು ಮೀನು ಮಾರಾಟ ಫೆಡರೇಷನ್‌ಗೆ ಗುತ್ತಿಗೆಯಾಗಿ ನೀಡಿರುವ ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್‌ನಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಉಡುಪಿ: ಮಲ್ಪೆ ಹನುಮಾನ್‌ನಗರದ ಸರ್ಕಾರಿ ಜಾಗವನ್ನು ಮೀನು ಮಾರಾಟ ಫೆಡರೇಷನ್‌ಗೆ ಗುತ್ತಿಗೆಯಾಗಿ ನೀಡಿರುವ ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್‌ನಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷರಾಗಿರುವ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ಗೆ ಕರ್ನಾಟಕ ಜಲ ಸಾರಿಗೆ ಮಂಡಳಿಯು ಮಲ್ಪೆಯ ಸೀ ವಾಕ್ ಬಳಿ 8 ಎಕರೆ ಸರ್ಕಾರಿ ಭೂಮಿಯನ್ನು 15 ವರ್ಷಗಳಿಗೆ ಗುತ್ತಿಗೆ ನೀಡಿದೆ. ಇದರಿಂದ ಸ್ಥಳೀಯ ಮೀನುಗಾರರಿಗೆ, ಭಜನಾ ಮಂದಿರದವರಿಗೆ ಹಾಗೂ ಪ್ರವಾಸಿಗರಿಗೆ ತೊಂದರೆಯಾಗಲಿದೆ. ಆದ್ದರಿಂದ ಗುತ್ತಿಗೆಯನ್ನು ರದ್ದುಗೊಳಿಸಿ‌ ಈ ಸರ್ಕಾರಿ ಭೂಮಿಯನ್ನು ಸಾರ್ವಜನಿಕ ಉಪಯೋಗಕ್ಕಲ್ಲದೇ ಯಾವುದೇ ಸಂಸ್ಥೆಗೆ ನೀಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ರಮೇಶ್‌ ಕಾಂಚನ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಮಾಜಿ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯೆ ಆಶಾ ಚಂದ್ರಶೇಖರ್, ಕಡೆಕಾರ್ ಗ್ರಾಪಂ ಉಪಾಧ್ಯಕ್ಷ ನವೀನ್ ಶೆಟ್ಟಿ, ಅಂಬಲಪಾಡಿ ಗ್ರಾಪಂ ಸದಸ್ಯ ಲಕ್ಷ್ಮಣ್ ಪೂಜಾರಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಸುಕೇಶ್ ಕುಂದರ್, ಸತೀಶ್ ಕೊಡವೂರು, ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಮುಂತಾದವರಿದ್ದರು.