ಸಾರಾಂಶ
ಕೆಪಿಸಿಸಿಯ ಹಿಂದುಳಿದ ವಿಭಾಗದಲ್ಲಿ ಆಯ್ಕೆ । ನೇಮಕಾತಿ ಪತ್ರ ನೀಡಿದ ಎಐಸಿಸಿ ಸದಸ್ಯ ಬಿ.ಶಿವರಾಂ
ಕನ್ನಡಪ್ರಭ ವಾರ್ತೆ ಬೇಲೂರುಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಬೇಲೂರಿನ ನರಸಿಂಹಸ್ವಾಮಿ ರವರನ್ನು ಆಯ್ಕೆ ಮಾಡಿದ್ದು ಮಾಜಿ ಸಚಿವರು ಮತ್ತು ಎಐಸಿಸಿ ಸದಸ್ಯ ಬಿ.ಶಿವರಾಂ ಅವರು ಕಾಂಗ್ರೆಸ್ ಕಚೇರಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ನೀಡುವ ಮೂಲಕ ಅಭಿನಂದಿಸಿದರು .
ನಂತರ ಶಿವರಾಂ ಮಾತನಾಡಿ, ರಾಜ್ಯದ ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸಿಕೊಂಡು ಹೋಗುವ ಕಾರ್ಯವನ್ನು ಕಾಂಗ್ರೆಸ್ ಪಕ್ಷ ಮಾಡಿಕೊಂಡು ಬರುತ್ತಿದೆ. ಅದೇ ರೀತಿ ಪಟ್ಟಣದಲ್ಲಿ ಹಲವಾರು ಸಮಾಜ ಸೇವೆಗಳಿಗೆ ಹೆಸರಾಗಿರುವ ನರಸಿಂಹಸ್ವಾಮಿ ಅವರನ್ನು ಇಂದು ಪಕ್ಷದ ವರಿಷ್ಠರ ಆದೇಶದ ಮೇರೆಗೆ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಅಧ್ಯಕ್ಷರಾದ ಮಧು ಬಂಗಾರಪ್ಪನ ಆಯ್ಕೆ ಮಾಡುವ ಮೂಲಕ ಸಣ್ಣ ಸಮುದಾಯವಾದ ಸವಿತಾ ಸಮಾಜದ ಮುಖಂಡರೊಬ್ಬರಿಗೆ ಹಾಸನ ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ರಾಜ್ಯಮಟ್ಟದಲ್ಲಿ ಸ್ಥಾನಮಾನ ನೀಡಿರುವುದು ಸಂತಸದ ವಿಚಾರವಾಗಿದೆ. ಪಕ್ಷದ ಆದೇಶದಂತೆ ಪಕ್ಷದ ಎಲ್ಲಾ ಕಾರ್ಯ ಚಟುವಟಿಕೆಗಳೆಲ್ಲ ಸಕ್ರಿಯವಾಗಿ ಭಾಗವಹಿಸುವ ಮೂಲಕ ಪಕ್ಷದ ಏಳಿಗೆಗೆ ಶ್ರಮವಿಸುವಂತೆ ಈ ಮೂಲಕ ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಹಿಂದುಳಿದ ವರ್ಗಗಳ ಆಯೋಗಕ್ಕೆ ಸ್ಥಾನಮಾನ ಸಿಗಲೆಂದು ಹಾರೈಸುತ್ತೇವೆ ಎಂದು ಹೇಳಿದರು.ಕಾಂಗ್ರೆಸ್ ಮುಖಂಡ ಸಂತೋಷ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೂಕ್ತ ಸ್ಥಾನಮಾನವನ್ನು ನೀಡುವ ಮೂಲಕ ಎಲ್ಲಾ ಸಮುದಾಯಕ್ಕೂ ಬೆನ್ನೆಲುಬಾಗಿದ್ದಾರೆ. ಅದೇ ರೀತಿ ಇಂದು ನರಸಿಂಹಸ್ವಾಮಿಯವರಿಗೆ ಈ ಸ್ಥಾನಮಾನ ಸಿಕ್ಕಿರುವುದು ಜಿಲ್ಲೆಗೆ ಹಾಗೂ ಸವಿತಾ ಸಮುದಾಯಕ್ಕೆ ಸಂತಸ ತಂದಿದೆ ಎಂದರು.
ನರಸಿಂಹಸ್ವಾಮಿ ಮಾತನಾಡಿ, ಕಳೆದ 20 ವರ್ಷಗಳಿಂದ ಇತರೆ ಪಕ್ಷದಲ್ಲಿ ನಿಷ್ಠೆಯಿಂದ ಕಾರ್ಯನಿರ್ವಹಿಸಿದರೂ ಗಣನೆಗೆ ತೆಗೆದುಕೊಂಡಿರಲಿಲ್ಲ. ಅತಿ ಹಿಂದುಳಿದ ಸಮುದಾಯಗಳಲ್ಲಿ ಒಂದಾದ ಸವಿತಾ ಸಮುದಾಯಕ್ಕೆ ಯಾವುದೇ ರೀತಿ ಸೂಕ್ತ ಸ್ಥಾನಮಾನ ಸಿಕ್ಕಿರಲಿಲ್ಲ. ಇಂದು ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಾಗಿ ಕಾಂಗ್ರೆಸ್ ಪಕ್ಷವು ಸ್ಥಾನಮಾನ ನೀಡಿ ಗೌರವಿಸಿರುವುದು ಹೆಮ್ಮೆಯ ವಿಷಯ. ಮುಂದಿನ ದಿನಗಳಲ್ಲಿ ಪಕ್ಷದ ವರಿಷ್ಠರ ಆದೇಶದ ಮೇರೆಗೆ ಪಕ್ಷದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯನಿರ್ವಹಿಸಲಾಗುವುದು ಎಂದು ಭರವಸೆ ನೀಡಿದರು.ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಶಾಂತ್ ಉಪಸ್ಥಿತಿಯೊಂದಿಗೆ ಸಮಾಜದ ಹಲವಾರು ಬಾಂಧವರು ಸಮ್ಮುಖದಲ್ಲಿ ನರಸಿಂಹಸ್ವಾಮಿ ಅವರನ್ನು ಅಭಿನಂದಿಸಲಾಯಿತು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಬೇಲೂರಿನ ನರಸಿಂಹಸ್ವಾಮಿ ರವರನ್ನು ಆಯ್ಕೆ ಮಾಡಲಾಗಿದೆ. ಸಮಿತಿ ಇತರ ಸದಸ್ಯರು ಇದ್ದರು.