ಸಾರಾಂಶ
ನನ್ನನ್ನು ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಬೆಂಬಲಿಸಿದ ಎಲ್ಲಾ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಿಗೂ ಅಭಿನಂದನೆ ಸಲ್ಲಿಸುತ್ತೇನೆ.
ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಸಮೀಪದ ಕಾಡುಕೊತ್ತನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಶಾಸಕ ಕೆ.ಎಂ.ಉದಯ್ ಬೆಂಬಲಿತ ಜಯರಾಜು ಅವಿರೋಧವಾಗಿ ಆಯ್ಕೆಯಾದರು. ಗ್ರಾಪಂನ ಹಿಂದಿನ ಅಧ್ಯಕ್ಷ ಕೆ.ಸಿ.ವೀರಭದ್ರ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಶಾಸಕ ಉದಯ್ ಅವರ ಬೆಂಬಲಿತ ಜಯರಾಜು ಹೊರತುಪಡಿಸಿ ಇತರೆ ಯಾವ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಗಳಾದ ಮದ್ದೂರು ತಾಪಂ ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕಿ ರಾಜೇಶ್ವರಿ ಅವರು ಜಯರಾಜು ಅವರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.ನಂತರ ನೂತನ ಗ್ರಾಪಂ ಅಧ್ಯಕ್ಷ ಜಯರಾಜು ಅಭಿನಂದನೆ ಸ್ವೀಕರಿಸಿ ಮಾತನಾಡಿ, ನನ್ನನ್ನು ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಬೆಂಬಲಿಸಿದ ಎಲ್ಲಾ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಗ್ರಾಪಂ ಮಾಜಿ ಅಧ್ಯಕ್ಷರಾದ ಕೆ.ಸಿ.ವೀರಭದ್ರ, ನವೀನ್ ಕುಮಾರ್, ದಯಾನಂದ, ಉಪಾಧ್ಯಕ್ಷ ಲೋಕೇಶ್, ಸದಸ್ಯರಾದ ಈ.ರುದ್ರಯ್ಯ, ಈ.ರಾಜು, ಡಿ.ಕೆಂಪರಾಜು, ಎಂ.ಸಿಂಧೂ, ಶಾರದಮ್ಮ, ಜಯಲಕ್ಷ್ಮೀ, ಪಿಡಿಒ ಅಶ್ವಿನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.