ಸಾರಾಂಶ
ನರೇಂದ್ರ ಮೋದಿಯವರು ಮೂರನೇ ಸಲ ಪ್ರಧಾನಿ ಆದ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಭಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ಹಾವೇರಿ: ನರೇಂದ್ರ ಮೋದಿಯವರು ಮೂರನೇ ಸಲ ಪ್ರಧಾನಿ ಆದ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಭಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಲಿತಾಂಶದ ಬಳಿಕ ರಾಜ್ಯದ ರಾಜಕಾರಣದಲ್ಲೂ ಬದಲಾವಣೆಯಾಗಲಿದೆ. ರಾಜಕಾರಣದಲ್ಲಿ ನಂಬರ್ ಮಹತ್ವ ಅಲ್ಲ, ಇಂದಿರಾಗಾಂಧಿ ದೇವರಾಜ್ ಅರಸ ನಡುವೆ ವ್ಯತ್ಯಾಸ ಬಂದಾಗ ರಾತ್ರೋ ರಾತ್ರಿ ಎಲ್ಲರೂ ಗುಂಡುರಾವ್ ಕಡೆಗೆ ಹೋದರು. ಆದ್ದರಿಂದ ಫಲಿತಾಂಶದ ಬಳಿಕ ಸಾಕಷ್ಟು ಬದಲಾವಣೆ ಆಗಲಿದೆ. ರಾಜ್ಯದಲ್ಲಿ ಬಿಜೆಪಿ 25 ಸೀಟ್ ಗೆಲ್ಲಲಿದ್ದು, ಕೇಂದ್ರದಲ್ಲಿ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಹೇಳಿದರು.