ಸಾರಾಂಶ
ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷ ಮಡಿಕೇರಿ ನಗರದಲ್ಲಿ ಬೃಹತ್ ಬೈಕ್ ಹಾಗೂ ಆಟೋ ಜಾಥಾ ನಡೆಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪರ ಮತಯಾಚಿಸಿತು. ಈ ಸಂದರ್ಭ ಮಾತನಾಡಿದ ಮಡಿಕೇರಿ ಶಾಸಕ ಡಾ ಎಂ ಮಂತರ್ ಗೌಡ, ಬಿಜೆಪಿ ಕೋಮು ದ್ವೇಷ ಬಿತ್ತಿ ವ್ಯವಸ್ಥೆ ಹಾಳು ಮಾಡುವ ಪ್ರಯತ್ನ ಮಾಡುತ್ತಿದೆ. ಇದನ್ನು ಮತದ ಮೂಲಕ ವಿರೋಧಿಸಿ ತೋರಿಸಬೇಕು ಎಂದು ಕರೆ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಬಿಜೆಪಿ ಕೋಮು ದ್ವೇಷ ಬಿತ್ತಿ ವ್ಯವಸ್ಥೆ ಹಾಳು ಮಾಡುವ ಪ್ರಯತ್ನ ಮಾಡುತ್ತಿದೆ. ಇದನ್ನು ಮತದ ಮೂಲಕ ವಿರೋಧಿಸಿ ತೋರಿಸಬೇಕು ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದ್ದಾರೆ.ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷ ನಗರದಲ್ಲಿ ಬೃಹತ್ ಬೈಕ್ ಹಾಗೂ ಆಟೋ ಜಾಥಾ ನಡೆಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪರ ಮತಯಾಚಿಸಿತು. ಈ ಸಂದರ್ಭ ಅವರು ಮಾತನಾಡಿದರು. ಬನ್ನಿ ಮಂಟಪದಿಂದ ಆರಂಭಗೊಂಡ ಜಾಥಾ, ಇಂದಿರಾ ಗಾಂಧಿ ವೃತ್ತ, ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಜಿಟಿ ವೃತ್ತ, ಫೀ.ಮಾ. ಕಾರ್ಯಪ್ಪ ವೃತ್ತದ ಕಡೆ ಸಾಗಿ ವಾಪಾಸ್ ಅಜ್ಜಮಾಡ ದೇವಯ್ಯ ವೃತ್ತದಲ್ಲಿ ಜಮಾವಣೆಗೊಂಡಿತು.
ಬೈಕ್ ಹಾಗೂ ಆಟೋಗಳಲ್ಲಿ ಆಗಮಿಸಿದ್ದ ನೂರಾರು ಸಂಖ್ಯೆಯ ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ರಾಜಮನೆತನವರಾಗಿದ್ದಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗೆ ಸಾಮಾನ್ಯರ ಕಷ್ಟ ತಿಳಿದಿರಬೇಕು ಎಂದರು.ವಿಧಾನ ಪರಿಷತ್ತು ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಮುಖಂಡ ಟಿ.ಪಿ.ರಮೇಶ್ ಮಾತನಾಡಿದರು.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಕೊಟ್ಟಮುಡಿ, ನಗರಾಧ್ಯಕ್ಷ ರಾಜೇಶ್ ಯಲ್ಲಪ್ಪ, ಜಿಲ್ಲಾ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಮುಖರಾದ ಪ್ರಕಾಶ್ ಆಚಾರ್ಯ. ತೆನ್ನೀರ ಮೈನಾ, ಪ್ರಭು ರೈ, ಜಿ.ಸಿ. ಜಗದೀಶ್, ಸದಾ ಮುದ್ದಪ್ಪ, ಕೆ.ಎಂ.ವೆಂಕಟೇಶ್ ಮತ್ತಿತರರಿದ್ದರು.