ಡಿಸಿಸಿ ಬ್ಯಾಂಕ್‌ನಲ್ಲಿ ಕಾಂಗ್ರೆಸ್‌- ಬಿಜೆಪಿ ಮೈತ್ರಿ

| Published : Nov 11 2025, 03:15 AM IST

ಸಾರಾಂಶ

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್‌- ಬಿಜೆಪಿ ನಡುವೆ 30-30 ತಿಂಗಳ ಅಧಿಕಾರ ಹಂಚಿಕೆ ಸೂತ್ರ ನಡೆದಿರುವುದು ಅಚ್ಚರಿ ಬೆಳವಣಿಗೆಗೆ ಕಾರಣವಾಯಿತು.

ಶ್ರೀಶೈಲ ಮಠದ

ಕನ್ನಡಪ್ರಭ ವಾರ್ತೆ ಬೆಳಗಾವಿಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್‌- ಬಿಜೆಪಿ ನಡುವೆ 30-30 ತಿಂಗಳ ಅಧಿಕಾರ ಹಂಚಿಕೆ ಸೂತ್ರ ನಡೆದಿರುವುದು ಅಚ್ಚರಿ ಬೆಳವಣಿಗೆಗೆ ಕಾರಣವಾಯಿತು.

ಸಹಕಾರ ಕ್ಷೇತ್ರ ರಾಜಕೀಯ ರಹಿತ ಎಂದು ಹೇಳುತ್ತಲೇ ಬಂದ ರಾಜಕೀಯ ನಾಯಕರು ಡಿಸಿಸಿ ಬ್ಯಾಂಕಿನ ನಿರ್ದೇಶಕರ ಚುನಾವಣೆಯಲ್ಲಿ ಪಕ್ಷಾತೀತವಾಗಿ ಒಗ್ಗೂಡಿ ಪ್ರಚಾರ ಕಾರ್ಯ ಕೈಗೊಂಡಿದ್ದರು. ಜಾರಕಿಹೊಳಿ ಸಹೋದರರು ಇದೇ ಮೊದಲ ಬಾರಿಗೆ ಒಗ್ಗಟ್ಟಿನ ಮೂಲಕ ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯ ಕೈಗೊಂಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕಾಂಗ್ರೆಸ್‌ ಪಕ್ಷದಲ್ಲಿದ್ದರೆ, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಬಿಜೆಪಿ ಪಕ್ಷದಲ್ಲಿದ್ದಾರೆ. ಆದರೂ ಡಿಸಿಸಿ ಬ್ಯಾಂಕಿನ ಮೇಲೆ ತಮ್ಮ ಪ್ರಾಬಲ್ಯ ಸಾಧಿಸಲು ಜಾರಕಿಹೊಳಿ ಸಹೋದರು ಒಂದಾಗಿದ್ದರು. ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರು ಮೇಲುಗೈ ಸಾಧಿಸಿದ್ದರು. ತಮ್ಮ ಪ್ರತಿಸ್ಪರ್ಧಿಯಾಗಿದ್ದ ರಮೇಶ ಕತ್ತಿ ಮತ್ತು ಲಕ್ಷ್ಮಣ ಸವದಿ ಬಣದ ವಿರುದ್ಧ ಸಮರ ಸಾರಿ, ಬ್ಯಾಂಕ್‌ ಅನ್ನು ತಮ್ಮ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಈಗ ಅಧ್ಯಕ್ಷ ಸ್ಥಾನವನ್ನು ಜಾರಕಿಹೊಳಿ ಸಹೋದರರು ಹೇಳಿದಂತೆಯೇ ಲಿಂಗಾಯತ ಸಮುದಾಯ ಲಿಂಗಾಯತ ಮುಖಂಡ, ಬಿಜೆಪಿ ನಾಯಕ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಬಿಟ್ಟು ಕೊಡಲಾಗಿದೆ. ಅದರಂತೆ ಕಾಂಗ್ರೆಸ್‌ನ ಕಾಗವಾಡ ಶಾಸಕ ಭರಮಗೌಡ (ರಾಜು) ಕಾಗೆ ಅವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್​ ಮೇಲುಗೈ ಸಾಧಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ರಮೇಶ್ ಕತ್ತಿ ಬಣವನ್ನು ಜಾರಕಿಹೊಳಿ ಸಹೋದರರು ಮೆಟ್ಟಿನಿಂತ ಡಿಸಿಸಿ ಬ್ಯಾಂಕ್ ತಮ್ಮ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಅಧ್ಯಕ್ಷ ಸ್ಥಾನವನ್ನು ಹೇಳಿದಂತೆ ಲಿಂಗಾಯತ ಬಿಜೆಪಿ ನಾಯಕನಿಗೆ ಬಿಟ್ಟು ಕೊಡಲಾಗಿದೆ. ಹೌದು.. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ರಾಜಕೀಯ ಬೆಳವಣಿಗೆ ಅಚ್ಚರಿ ಮೂಡಿಸಿದೆ.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರಿನಲ್ಲೇ ಅಣ್ಣಾಸಾಹೇಬ ಜೊಲ್ಲೆ ಮತ್ತು ರಾಜು ಕಾಗೆ ನಾಮಪತ್ರ ಸಲ್ಲಿಸಲು ತೆರಳಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು.

----

ಕೋಟ್‌.....

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದೇವೆ. 30 ತಿಂಗಳ ಅವಧಿಗೆ ಅಧಿಕಾರ ಹಂಚಿಕೆಯಾಗಿದೆ. ಬಿಜೆಪಿಗೆ ಈಗ ಅಧ್ಯಕ್ಷ ಸ್ಥಾನ, ಕಾಂಗ್ರೆಸ್ ಗೆ ಉಪಾಧ್ಯಕ್ಷ ಸ್ಥಾನ ಹಂಚಿಕೊಂಡಿದ್ದೇವೆ. ಈ ಹಿಂದೆ ನಾವು 3 ಜನ ಇದ್ದರೂ ಬಿಜೆಪಿಯವರು ಅಧ್ಯಕ್ಷ ಸ್ಥಾನ ಬಿಟ್ಟು ಕೊಟ್ಟಿದ್ದರು. ಈಗ ನಾವು ಬಿಜೆಪಿಯವರಿಗೆ ಅಧ್ಯಕ್ಷ ಸ್ಥಾನ ಬಿಟ್ಟು ಕೊಟ್ಟಿದ್ದೇವೆ.

- ಸತೀಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ