2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ಎನ್.ಚಂದ್ರಪ್ಪ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಟಿಕೆಟ್ ಘೋಷಣೆಯಾದ ನಂತರ ಮೊದಲ ಬಾರಿಗೆ ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆಯುವ ಮೂಲಕ ಲೋಕಸಭಾ ಚುನಾವಣಾ ರಂಗಪ್ರವೇಶ ಮಾಡಿದರು.

ಚಳ್ಳಕೆರೆ: 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ಎನ್.ಚಂದ್ರಪ್ಪ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಟಿಕೆಟ್ ಘೋಷಣೆಯಾದ ನಂತರ ಮೊದಲ ಬಾರಿಗೆ ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆಯುವ ಮೂಲಕ ಲೋಕಸಭಾ ಚುನಾವಣಾ ರಂಗಪ್ರವೇಶ ಮಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿ ಕಳೆದ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ೨೦೧೪ರಲ್ಲೇ ಈ ಕ್ಷೇತ್ರದಿಂದ ಆಯ್ಕೆಯಾದ ನಂತರ ೨೦೧೯ರಲ್ಲಿ ಮತ್ತೊಮ್ಮೆ ಪಕ್ಷ ಈ ಕ್ಷೇತ್ರದಲ್ಲಿ ಅವಕಾಶ ನೀಡಿತ್ತು. ಆದರೆ, ಆ ಸಂದರ್ಭದಲ್ಲಿ ನಾನಾ ಕಾರಣಗಳಿಂದ ಹಿನ್ನಡೆ ಅನುಭವಿಸಬೇಕಾಯಿತು. ಮತ್ತೊಮ್ಮೆ 2024ರ ಲೋಕಸಭಾ ಚುನಾವಣೆಯಲ್ಲಿ ಮೂರನೇ ಬಾರಿಗೆ ನನ್ನ ಮೇಲೆ ಪಕ್ಷ ವಿಶ್ವಾಸವಿಟ್ಟು ಅವಕಾಶ ನೀಡಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳ ಶುಭಹಾರೈಕೆಯಲ್ಲದೆ ನಾಯಕನಹಟ್ಟಿ ಗುರುತಿಪ್ಪೇರುದ್ರ ಸ್ವಾಮಿ ಆಶೀರ್ವಾದ ನಾನು ಪಡೆದಿದ್ದೇನೆ. ಕಳೆದ ಸುಮಾರು 10 ತಿಂಗಳಿಂದ ರಾಜ್ಯದಲ್ಲಿ ಸರ್ಕಾರ 5 ಪ್ರಮುಖ ಗ್ಯಾರಂಟಿಗಳನ್ನು ಜನರಿಗೆ ನೀಡುವ ಮೂಲಕ ಜನರ ವಿಶ್ವಾಸ ಗೆದ್ದಿದೆ. ಈ ವಿಶ್ವಾಸವೇ ಚುನಾವಣೆಯಲ್ಲಿ ಮತಗಳಾಗಿ ಪರಿವರ್ತನೆಯಾಗಲಿವೆ. ಈ ಬಾರಿ ಈ ಕ್ಷೇತ್ರದಿಂದ ಗೆಲುವು ಸಾಧಿಸುವ ಆತ್ಮವಿಶ್ವಾಸ ನನಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ದ್ರಾಕ್ಷಿ ಹಾಗೂ ವೈನ್ ನಿಗಮ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್‌ ಬಾಬು, ನಾಗೇಶ್‌ರೆಡ್ಡಿ, ಸಿ.ವಿ.ಮೋಹನ್, ಕಿಸಾನ್‌ಸೆಲ್ ಜಿಲ್ಲಾಧ್ಯಕ್ಷ ನಾಗರಾಜು, ಗೌರಸಮುದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ಓಬಣ್ಣ ಮುಂತಾದವರು ಉಪಸ್ಥಿತರಿದ್ದರು.