ಸಾರಾಂಶ
- ಡಿಸಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ ದ್ವಿಪ್ರತಿಯಲ್ಲಿ ಸಲ್ಲಿಕೆ - ನಾಮಪತ್ರ ಸಲ್ಲಿಕೆಗೂ ಮೊದಲು ನಗರ ದೇವತೆ ಶ್ರೀ ದುರ್ಗಾಂಬಿಕಾ ದರ್ಶನ ಪಡೆದು, ಪೂಜೆ ಸಲ್ಲಿಸಿದ ಡಾ.ಪ್ರಭಾ
- - - ಕನ್ನಡಪ್ರಭ ವಾರ್ತೆ, ದಾವಣಗೆರೆ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಪ್ರಭಾ ಮಲ್ಲಿಕಾರ್ಜುನ ಶುಕ್ರವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ ದ್ವಿಪ್ರತಿಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿಗೆ ಪತಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಪುತ್ರ ಸಮರ್ಥ ಎಂ.ಶಾಮನೂರು, ಶಾಸಕರಾದ ಹರಪನಹಳ್ಳಿ ಲತಾ ಮಲ್ಲಿಕಾರ್ಜುನ, ಮಾಯಕೊಂಡ ಕೆ.ಎಸ್.ಬಸವಂತಪ್ಪ, ಜಗಳೂರು ಬಿ.ದೇವೇಂದ್ರಪ್ಪ, ಕುರುಬ ಸಮಾಜದ ಮುಖಂಡ ಗಣೇಶ್ ಜೊತೆ ಆಗಮಿಸಿದ ಡಾ.ಪ್ರಭಾ ಉತ್ಸಾಹದಿಂದಲೇ ಮೊದಲ ನಾಮಪತ್ರ ಸಲ್ಲಿಸಿದರು.
ಶ್ರೀ ದುಗ್ಗಮ್ಮನ ದರ್ಶನ:ನಾಮಪತ್ರ ಸಲ್ಲಿಕೆಗೂ ಮುನ್ನ ಡಾ.ಪ್ರಭಾ ಅವರು ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನಕ್ಕೆ ತೆರಳಿ, ದುಗ್ಗಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದು ವಿಶೇಷ.
ಪ್ರಥಮ ಮಹಿಳಾ ಸಂಸದೆಯಾಗಿಸಿ:ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು, ದಾವಣಗೆರೆ ಕ್ಷೇತ್ರಕ್ಕೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದಿಂದ ಸ್ಪರ್ಧಿಗಿಳಿಸಲಾಗಿದೆ. ಜಿಲ್ಲೆಯ ಸಮಸ್ತ ಮತದಾರು ತುಂಬು ಹೃದಯದಿಂದ ಆಶೀರ್ವಾದ ಮಾಡಬೇಕು. ಆ ಮೂಲಕ ದಾವಣಗೆರೆಯ ಪ್ರಥಮ ಮಹಿಳಾ ಸಂಸದೆಯಾಗಿ ಡಾ.ಪ್ರಭಾ ಅವರನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.
ಎರಡ್ಮೂರು ಸಲ ನಾಮಪತ್ರ ಸಲ್ಲಿಸ್ತಾರೆ:ಡಾ.ಪ್ರಭಾ ಮಲ್ಲಿಕಾರ್ಜುನ ಒಟ್ಟು 2-3 ಸಲ ನಾಮಪತ್ರ ಸಲ್ಲಿಸಲಿದ್ದಾರೆ. ಬೃಹತ್ ಮೆರವಣಿಗೆ ಮೂಲಕವೂ ನಾಮಪತ್ರ ಸಲ್ಲಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸುವ ಚರ್ಚೆ ನಡೆಸಿದ್ದೇವೆ. ಕಾಂಗ್ರೆಸ್ ಪ್ರಣಾಳಿಕೆಯಂತೆ ಪಂಚನ್ಯಾಯ ಯೋಜನೆಯನ್ನು ಇಂದಿನಿಂದಲೇ ನಮ್ಮ ಅಭ್ಯರ್ಥಿ, ಕಾರ್ಯಕರ್ತರು, ಅಭಿಮಾನಿಗಳು ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತೇವೆ ಎಂದು ಎಸ್ಎಸ್ಎಂ ತಿಳಿಸಿದರು.
ಕಾಂಗ್ರೆಸ್ ಸೇರೋರನ್ನು ಕಾದುನೋಡಿ:ಜಗಳೂರು ಮಾಜಿ ಶಾಸಕ, ಬಿಜೆಪಿ ಹಿರಿಯ ಮುಖಂಡ ಟಿ.ಗುರುಸಿದ್ದನಗೌಡ, ಪತ್ರ ಡಾ. ಟಿ.ಜಿ. ರವಿಕುಮಾರ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಯಾವುದೇ ಮಾತನಾಡಿಲ್ಲ. ಇನ್ನೂ ಸಾಕಷ್ಟು ಜನರು ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ. ಕಾದು ನೋಡಿ. ಕಾಂಗ್ರೆಸ್ಸಿನಿಂದ ಬಿಜೆಪಿಗೆ ಹೋದವರಿಗೆ ಸರಿಯಾಗಿ ಮಾತನಾಡಿಸುತ್ತಿಲ್ಲ. ಯಾವುದೇ ಬೆಲೆ ಕೊಡುತ್ತಿಲ್ಲ. ಹಣದ ಹಮ್ಮಿನಿಂದ ಇಂತಹವರನ್ನು ಅಲ್ಲಿ ನೋಡುತ್ತಿದ್ದಾರೆ. ಈಗಾಗಲೇ ಬಿಜೆಪಿಗೆ ಹೋದ ಸಾಕಷ್ಟು ಜನರು ಸಾಕಾಗಿ ಹೋಗಿದ್ದಾರೆ. ಎಷ್ಟು ಜನ ನಮ್ಮ ಕಾಂಗ್ರೆಸ್ಸಿಗೆ ಬರುತ್ತಾರೆಂಬುದನ್ನು ನೀವೇ ಕಾದು ನೋಡಿ ಎಂದು ಮಲ್ಲಿಕಾರ್ಜುನ ಅವರು ಹೊಸ ಬಾಂಬ್ ಸಿಡಿಸಿದರು.
- - - ಬಾಕ್ಸ್ಮತದಾರರು ಬದಲಾವಣೆ ಬಯಸಿದ್ದಾರೆ: ಪ್ರಭಾ
ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಮಾತನಾಡಿ, ಈಗಾಗಲೇ 4 ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೇನೆ. ಕ್ಷೇತ್ರದ ಜನರು ಬದಲಾವಣೆಯನ್ನೂ ಬಯಸಿದ್ದಾರೆ. ಈ ಸಲ ತಮಗೆ ನಮ್ಮ ಕ್ಷೇತ್ರ, ಜಿಲ್ಲೆಯ ಮತದಾರರು ಆಶೀರ್ವದಿಸುವ ಮೂಲಕ ಸಂಸದೆಯಾಗಿ ಮಾಡಿ, ಹೊಸ ಇತಿಹಾಸ ಬರೆಯಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು. ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಆಸೆ ಸಹಜವಾಗಿಯೇ ಎಲ್ಲರಿಗೂ ಇರುತ್ತದೆ. ಆದರೆ, ಯಾರನ್ನು ಆಯ್ಕೆ ಮಾಡಬೇಕೆಂಬುದನ್ನು ಜನತೆ ನಿರ್ಧರಿಸುತ್ತಾರೆ ಎಂದು ಕಾಂಗ್ರೆಸ್ ಟಿಕೆಟ್ ವಂಚಿತ ಜಿ.ಬಿ.ವಿನಯಕುಮಾರ ಪಕ್ಷೇತರ ಅಥವಾ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಪ್ರಶ್ನೆಗೆ ಡಾ.ಪ್ರಭಾ ಪ್ರತಿಕ್ರಿಯಿಸಿದರು.- - -
ಕೋಟ್ಟಾಪ್ ಕೋಟ್ಕಾಂಗ್ರೆಸ್ ಸರ್ಕಾರದ ಐದೂ ಗ್ಯಾರಂಟಿ ಯೋಜನೆಗಳು ಪ್ರತಿ ಮನೆಗೂ ತಲುಪಿವೆ. ಇನ್ನೂ ಹೆಚ್ಚಿನ ಮಟ್ಟದಲ್ಲಿ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ. ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆ ಕ್ಷೇತ್ರದ ಪ್ರತಿಯೊಂದು ಆಗುಹೋಗು, ಸಮಸ್ಯೆಗಳಿಗೆ ಲೋಕಸಭೆಯಲ್ಲಿ ಧ್ವನಿ ಎತ್ತಲಿದ್ದಾರೆ. ಕ್ಷೇತ್ರದ ಜನರಿಗೆ ಸ್ಪಂದಿಸುತ್ತಾರೆಂಬ ಸಂಪೂರ್ಣ ವಿಶ್ವಾಸವಿದೆ
- ಎಸ್.ಎಸ್. ಮಲ್ಲಿಕಾರ್ಜುನ, ಸಚಿವ
- - --12ಕೆಡಿವಿಜಿ5:
ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ನಾಮಪತ್ರ ಸಲ್ಲಿಸಿದರು. ಸಚಿವ ಎಸ್ಎಸ್ ಮಲ್ಲಿಕಾರ್ಜುನ, ಶಾಸಕರಾದ ಕೆ.ಎಸ್.ಬಸವಂತಪ್ಪ ಇತರರು ಈ ಸಂದರ್ಭ ಇದ್ದರು.