ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ: ವಿಜಯ ರಾಮೇಗೌಡ

| Published : May 01 2024, 01:21 AM IST

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ: ವಿಜಯ ರಾಮೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಈಗಾಗಲೇ ಅಭ್ಯರ್ಥಿಗಳ ಪರ ಬೆಟ್ಟಿಂಗ್ ಕಟ್ಟುವ ಚಟುವಟಿಕೆಗಳ ಬಗ್ಗೆ ಕೇಳಿ ಬಂದಿದೆ. ಸೋಲು ಗೆಲುವುಗಳನ್ನು ಮತದಾರರು ಈಗಾಗಲೇ ನಿರ್ಧರಿಸಿದ್ದು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಆದ್ದರಿಂದ ನಮ್ಮ ಕಾರ್ಯಕರ್ತರಾಗಲಿ ಬೇರೆ ಯಾರಾದರೂ ಆಗಲಿ ಯಾವುದೇ ಕಾರಣಕ್ಕೂ ಯಾರ ಪರವಾಗಲಿ ಅಥವಾ ವಿರುದ್ಧವಾಗಲಿ ಬೆಟ್ಟಿಂಗ್ ಮತ್ತಿತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಡಿ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಮುಖಂಡ ವಿಜಯ ರಾಮೇಗೌಡ ಹೇಳಿದರು.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕ್ಷೇತ್ರದಲ್ಲಿ ಶೇ.80ಕ್ಕೂ ಅಧಿಕ ಮತದಾನವಾಗಿದ್ದು, ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಜೊತೆಗೆ ಹೆಚ್ಚಿನ ಮತದಾನ ಮಾಡಿರುವ ಮಹಿಳೆಯರು ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದಾರೆ ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ವರ್ಚಸ್ಸು, ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಕಾಂಗ್ರೆಸ್ ಕೈ ಹಿಡಿಯಲಿದೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿಯನ್ನು ಹೆಚ್ಚಿಸಿದ್ದು, ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅಧಿಕ ಬಹುಮತ ಗಳಿಸಿ ವಿಜಯಶಾಲಿಯಾಗಲಿದ್ದಾರೆ. ಪಕ್ಷದ ಪರ ಒಗ್ಗಟ್ಟಿನಿಂದ ಕೆಲಸ ಮಾಡಿದ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಟ್ಟಿಂಗ್ ದಂದೆಗೆ ಹೋಗಬೇಡಿ:

ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಈಗಾಗಲೇ ಅಭ್ಯರ್ಥಿಗಳ ಪರ ಬೆಟ್ಟಿಂಗ್ ಕಟ್ಟುವ ಚಟುವಟಿಕೆಗಳ ಬಗ್ಗೆ ಕೇಳಿ ಬಂದಿದೆ. ಸೋಲು ಗೆಲುವುಗಳನ್ನು ಮತದಾರರು ಈಗಾಗಲೇ ನಿರ್ಧರಿಸಿದ್ದು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಆದ್ದರಿಂದ ನಮ್ಮ ಕಾರ್ಯಕರ್ತರಾಗಲಿ ಬೇರೆ ಯಾರಾದರೂ ಆಗಲಿ ಯಾವುದೇ ಕಾರಣಕ್ಕೂ ಯಾರ ಪರವಾಗಲಿ ಅಥವಾ ವಿರುದ್ಧವಾಗಲಿ ಬೆಟ್ಟಿಂಗ್ ಮತ್ತಿತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಡಿ. ಬೆಟ್ಟಿಂಗ್ ನಿಂದ ನಮ್ಮ ಮನೆಗಳು ಹಾಳಾಗುತ್ತವೆ. ಕುಟುಂಬದ ಘನತೆ ಗೌರವಗಳು ಬೀದಿ ಪಾಲಾಗುತ್ತವೆ ಎಂದು ವಿನಂತಿ ಮಾಡಿಕೊಂಡಿದ್ದಾರೆ.