ಶ್ರೀಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು

| Published : Mar 23 2024, 01:13 AM IST

ಶ್ರೀಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು
Share this Article
  • FB
  • TW
  • Linkdin
  • Email

ಸಾರಾಂಶ

ನಾಡಿನ ಸಮಸ್ತ ಜನರ ಬಾಳಲ್ಲಿ ಸುಖ, ಸಮೃದ್ಧಿ ನೆಲೆಸಲಿ. ಉತ್ತಮ ಮಳೆ, ಬೆಳೆಯಾಗಿ ಸುಖ-ಸಂತೋಷ ಕರುಣಿಸುವಂತೆ ಶ್ರೀಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿದ್ದಾಗಿ ತಿಳಿಸಿದ ವೆಂಕಟರಮಣೇಗೌಡ. ದೇವಿಗೆ ಸೀರೆ, ಅರಿಶಿನ, ಕುಂಕುಮ, ಬಳೆ ಹಾಗೂ ಕಾಣಿಕೆಯನ್ನು ನೀಡಿ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ನಾಡಿನ ಅಧಿದೇವತೆ ಶ್ರೀಚಾಮುಂಡೇಶ್ವರಿ ದೇವಿಗೆ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದರು.

ದೇವಿಗೆ ಸೀರೆ, ಅರಿಶಿನ, ಕುಂಕುಮ, ಬಳೆ ಹಾಗೂ ಕಾಣಿಕೆಯನ್ನು ನೀಡಿ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದರು. ದೇವಿಯ ದರ್ಶನದ ಬಳಿಕ ಮಾತನಾಡಿದ ವೆಂಕಟರಮಣೇಗೌಡ ಅವರು, ನಾಡಿನ ಸಮಸ್ತ ಜನರ ಬಾಳಲ್ಲಿ ಸುಖ, ಸಮೃದ್ಧಿ ನೆಲೆಸಲಿ. ಉತ್ತಮ ಮಳೆ, ಬೆಳೆಯಾಗಿ ಸುಖ-ಸಂತೋಷ ಕರುಣಿಸುವಂತೆ ಶ್ರೀ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿದ್ದಾಗಿ ತಿಳಿಸಿದರು.

ಶಾಸಕ ದಿನೇಶ್ ಗೂಳಿಗೌಡ ಮಾತನಾಡಿ, ಲೋಕ ಕಲ್ಯಾಣಾರ್ಥ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ವಿಶ್ವಾಸದಿಂದ ನುಡಿದರು. ಕಾಂಗ್ರೆಸ್ ಮುಖಂಡರಾದ ಗೋಪಾಲ್, ಮುನೇಗೌಡ ಇತರರಿದ್ದರು.ಬಿಜೆಪಿ ದ್ವೇಷ ರಾಜಕಾರಣಕ್ಕೆ ಜನರೇ ತಕ್ಕ ಉತ್ತರ: ಕೆ.ಜೆ.ದೇವರಾಜು

ಮಳವಳ್ಳಿ:ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತ ಮಾಡಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆ ಗೆಲ್ಲಲು ಹೊರಟಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ದೇವರಾಜು ಕಿಡಿಕಾರಿದರು.ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಚಿಕ್ಕಲಿಂಗಯ್ಯ, ಸದಸ್ಯರಾದ ಅಮೃತ್ ಕಂಠೇಶ್ ಹಾಗೂ ಸಾಧಿಕ್ ಪಾಷಾ ಅವರನ್ನು ಅಭಿನಂದಿಸಿ ಮಾತನಾಡಿದರು.ಕಾಂಗ್ರೆಸ್ ನ ಬ್ಯಾಂಕ್ ಖಾತೆಗಳನ್ನು ಸ್ಥಗಿತ ಮಾಡಿಸಿರುವುದು ಪ್ರಜಾಪ್ರಭುತ್ವದ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತವೆ ಎಂದರು.ಕೂಡಲೇ ಸ್ಥಗಿತಗೊಂಡಿರುವ ಬ್ಯಾಂಕ್ ಖಾತೆಗಳ ಬಳಕೆಗೆ ಅವಕಾಶ ನೀಡಬೇಕು. ಬಿಜೆಪಿ ದ್ವೇಷ ರಾಜಕಾರಣಕ್ಕೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ ಮಾತನಾಡಿ, ನನ್ನ ಮೇಲೆ ನಂಬಿಕೆ ಇಟ್ಟು ಇಂಥ ದೊಡ್ಡ ಜವಾಬ್ದಾರಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಆಶಯದಂತೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುವಂತೆ ಕರ್ತವ್ಯ ನಿರ್ವಹಿಸಲಾಗುವುದು ಎಂದರು.ಈ ವೇಳೆ ಸದಸ್ಯರಾದ ಅಮೃತ್ ಕಂಠೇಶ್ ಹಾಗೂ ಸಾಧಿಕ್ ಪಾಷಾ ಮಾತನಾಡಿದರು.