ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲ್ಲಿಸಿ ಮಂಡ್ಯದ ಹಿರಿಮೆ ಉಳಿಸಿ: ಚಿತ್ರನಟ ದರ್ಶನ್

| Published : Apr 23 2024, 12:48 AM IST

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲ್ಲಿಸಿ ಮಂಡ್ಯದ ಹಿರಿಮೆ ಉಳಿಸಿ: ಚಿತ್ರನಟ ದರ್ಶನ್
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರ ಮಹಿಳೆಯರು, ಬಡವರು ಹಾಗೂ ಜನ ಸಾಮಾನ್ಯರ ಅಭಿವೃದ್ಧಿಗೆ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಿಂದ ಸ್ಟಾರ್ ಚಂದ್ರು ಅವರನ್ನು ಭಾರೀ ಬಹುಮತಗಳಿಂದ ಗೆಲ್ಲಿಸುವುದರ ಮೂಲಕ ಬೆಂಬಲಿಸುವ ಭರವಸೆ ಇದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು)ರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಮಂಡ್ಯದ ಹಿರಿಮೆ ಉಳಿಸಬೇಕು ಎಂದು ಚಿತ್ರನಟ ದರ್ಶನ್ ಕರೆ ನೀಡಿದರು.

ತಾಲೂಕಿನ ಕೊಪ್ಪದಲ್ಲಿ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ರೋಡ್ ಶೋ ಮೂಲಕ ಪ್ರಚಾರ ಸಭೆಯಲ್ಲಿ ಮಾತನಾಡಿ, ತೆರೆ ಹಿಂದಿರುವ ಕೆಲವು ನಾಯಕರು ನನಗೆ ಈ ಹಿಂದೆ ಮಾಡಿದ ಸಹಾಯ ಹಾಗೂ ಋಣವನ್ನು ಈ ಜನ್ಮದಲ್ಲಿ ತೀರಿಸಲು ಆಗುವುದಿಲ್ಲ. ಆದ್ದರಿಂದ ಅವರಿಗೋಸ್ಕರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ್ದೇನೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ರಾಜ್ಯ ಸರ್ಕಾರ ಮಹಿಳೆಯರು, ಬಡವರು ಹಾಗೂ ಜನ ಸಾಮಾನ್ಯರ ಅಭಿವೃದ್ಧಿಗೆ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಿಂದ ಸ್ಟಾರ್ ಚಂದ್ರು ಅವರನ್ನು ಭಾರೀ ಬಹುಮತಗಳಿಂದ ಗೆಲ್ಲಿಸುವುದರ ಮೂಲಕ ಬೆಂಬಲಿಸುವ ಭರವಸೆ ಇದೆ ಎಂದರು.

ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಸ್ಥಳಿಯರಲ್ಲ. ಸ್ಟಾರ್ ಚಂದ್ರು ಮೂಲತಃ ನಮ್ಮ ಜಿಲ್ಲೆಯವರು. ಎಚ್ಡಿಕೆ ಸಿಎಂ ಆಗಿ ಜಿಲ್ಲೆ ಅಭಿವೃದ್ಧಿ ಏನು ಮಾಡಿಲ್ಲ. ಲೋಕಸಭಗೆ ಚುನಾಯಿತರಾದರೆ ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

ಶಾಸಕರಾದ ಉದಯ್, ಗಣಿಗ ರವಿಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಅಪ್ಪಾಜಿಗೌಡ, ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್, ತಾಪಂ ಮಾಜಿ ಅಧ್ಯಕ್ಷೆ ಲಕ್ಷ್ಮಿ ಚೆನ್ನರಾಜು, ತಾಪಂ ಮಾಜಿ ಉಪಾಧ್ಯಕ್ಷರಾದ ರಾಮಚಂದ್ರು, ಬೆಕ್ಕಳಲೆ ರಘು, ಮುಖಂಡರಾದ ಕುಮಾರ್ ಕೊಪ್ಪ, ಕ್ರಾಂತಿಸಿಂಹ, ಚಿಕ್ಕೊನಹಳ್ಳಿ ತಮ್ಮಯ್ಯ, ಪರ್ವಿಜ್ ಇದ್ದರು.ಚಿತ್ರನಟ ದರ್ಶನ್ ಅದ್ಧೂರಿ ಪ್ರಚಾರ, ಶಾಸಕ ಕೆ.ಎಂ.ಉದಯ್, ಸ್ಟಾರ್ ಚಂದ್ರು ಸಾಥ್

ಮದ್ದೂರು:ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಚಿತ್ರನಟ ದರ್ಶನ್ ಸೋಮವಾರ ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅದ್ಧೂರಿ ಪ್ರಚಾರ ನಡೆಸಿದರು.

ತಾಲೂಕಿನ ಕೆಸ್ತೂರು, ಕೆ. ಹೊನ್ನಲಗೆರೆ, ಮಡೇನಹಳ್ಳಿ ಕ್ರಾಸ್, ಕೆ.ಎಂ.ದೊಡ್ಡಿ, ಬೆಸಗರಹಳ್ಳಿ ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದ ನಟ ದರ್ಶನ್ ಚುನಾವಣೆಯಲ್ಲಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.ಅಭ್ಯರ್ಥಿ ಸ್ಟಾರ್ ಚಂದ್ರು ಮಾತನಾಡಿ, ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ, ಉತ್ಪನ್ನಗಳ ಮೇಲಿನ ಜಿಎಸ್‌ಟಿ ತೆರವು, ಸಾಲ ಮನ್ನಾ ಸೇರಿದಂತೆ ಕೃಷಿಕರ ಕಲ್ಯಾಣ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ಪಕ್ಷ 10 ಹಲವಾರು ಕಾರ್ಯಕ್ರಮಗಳನ್ನು ಘೋಷಣೆ ಮಾಡಿದೆ ಎಂದರು.

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ನಾನು ಬೆಂಬಲವಾಗಿ ನಿಂತು ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.ಶಾಸಕ ಕೆ.ಎಂ.ಉದಯ್ ಮಾತನಾಡಿ, ಸ್ಟಾರ್ ಚಂದ್ರು ಪ್ರಾಮಾಣಿಕ ಸರಳ ಸಜ್ಜನಿಕೆಯ ವ್ಯಕ್ತಿ. ವ್ಯಕ್ತಿ. ನಮ್ಮ ಜಿಲ್ಲೆಯವರೇ ಆಗಿರುವ ಇವರನ್ನು ಲೋಕಸಭೆಗೆ ಆಯ್ಕೆ ಮಾಡುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಶಾಸಕರೊಂದಿಗೆ ಸ್ಟಾರ್ ಚಂದ್ರು ಸಹ ಕೈಜೋಡಿಸಲಿದ್ದಾರೆ. ಇದರಿಂದ ಕಾವೇರಿ ನದಿ ನೀರಿನ ಸಮಸ್ಯೆ ಜೊತೆಗೆ ಮಂಡ್ಯ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.