ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಚಾಮರಾಜನಗರ ತಾಲೂಕಿನ ನಂಜೇದೇವನಪುರ ಗ್ರಾಮದಲ್ಲಿ ಮತಯಾಚನೆಮಾಡಿದರು. ಇದೇ ವೇಳೆ ಮಾತನಾಡಿ, ಚಾಮರಾಜನಗರ ಲೋಕಸಭೆ ಕ್ಷೇತ್ರದಲ್ಲಿ ಈಗಾಗಲೇ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ತಮಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ರಾಜ್ಯಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆ ಮಾಡಿದೆ. ಹಾಗೆಯೇ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರ ಪಡೆದು, ಜನರಿಗೆ ಅನುಕೂಲಕರ ಯೋಜನೆಗಳನ್ನು ಅನುಷ್ಠಾನ ಮಾಡಲು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ, ಕ್ಷೇತ್ರದ ಮತದಾರರು ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ,ಮರಿಸ್ವಾಮಿ ಮಾತನಾಡಿ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಪುತ್ರರಾದ ಸುನಿಲ್ ಬೋಸ್ ೧೭ ವರ್ಷಗಳಿಂದ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ದುಡಿದಿದ್ದಾರೆ. ಜನರಸೇವೆ ಮಾಡಲು ಇವರು ಉತ್ಸುಕರಾಗಿದ್ದು, ಇವರನ್ನು ಹೆಚ್ಚಿನ ಮತಗಳಿಂದ ಆಯ್ಕೆ ಮಾಡಬೇಕು ಎಂದರು.ಮಾಜಿ ಸಂಸದ ಎಂ,ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಪ್ರದಾನ ಕಾರ್ಯದರ್ಶಿ ಎಸ್‌ಪಿಕೆ ಆರ್.ಉಮೇಶ್, ಚಿಕ್ಕಮಹಾದೇವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್,ಎ.ಎಸ್.ಗುರುಸ್ವಾಮಿ, ಗ್ರಾಪಂ ಅಧ್ಯಕ್ಷ ಶೇಖರಪ್ಪ, ಎಪಿಎಂಸಿ ಮಾಜಿ ಸದಸ್ಯ ಶಿವಸ್ವಾಮಿ, ಹಿಂದುಳಿಂದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ, ಎನ್.ಆರ್.ಪುರುಷೋತ್ತಮ್, ರಾಜಣ್ಣ, ಕುಮಾರ್, ಕಾರ್ಯಕರ್ತರ, ಮುಖಂಡರು ಭಾಗವಹಿಸಿದ್ದರು.