ಸಾರಾಂಶ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯೊಂದಿಗೆ ರಾಜ್ಯದ ಜನರು ನೆಮ್ಮದಿ ಜೀವನ ನಡೆಸುತ್ತಿದ್ದಾರೆ. ಪ್ರತಿಯೊಬ್ಬ ಮುಖಂಡರು ಪ್ರತಿ ಮನೆಗಳಿಗೆ ಭೇಟಿ ನೀಡಿ ರಾಜ್ಯ ಕಾಂಗ್ರೆಸ್ ಅಭಿವೃದ್ದಿ ಕುರಿತ ಗ್ಯಾರಂಟಿ ಯೋಜನೆಗಳ ಮನವರಿಸಿಕೆ ಮಾಡಿಕೊಡುವಂತೆ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಲೋಕಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪಟ್ಟಣದ ಗುಂಬಜ್ , ಚಂದ್ರವನ ಆಶ್ರಮ, ವಕೀಲರ ಸಂಘದ ಕಚೇರಿ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಬಿರುಸಿನ ಪ್ರಚಾರ ನಡೆಸಿದರು.ಪಟ್ಟಣದ ಗಂಜಾಂನ ಗುಂಬಜ್ ಗೆ ಭೇಟಿ ನೀಡಿ ಟಿಪ್ಪು ಸಮಾಧಿಗೆ ಹೂವಿನ ಚಾದರ ಹೊದಿಸಿ ಪಾರ್ಥನೆ ಸಲ್ಲಿಸಿದರು. ಸ್ಥಳೀಯ ಕಾಂಗ್ರೆಸ್‌ನ ಶಾಸಕ ರಮೇಶ ಬಂಡಿಸಿದ್ದೇಗೌಡ ಜೊತೆಯಲ್ಲಿದ್ದು ಯುವ ಮುಖಂಡರನ್ನು ಪರಿಚಯಿಸಿ ಕಾಂಗ್ರೆಸ್ ಪರ ಮತ ಚಲಾಯಿಸಲು ಮನವಿ ಮಾಡಿದರು.
ಈ ವೇಳೆ ಶಾಸಕ ರಮೇಶ ಬಂಡಿಸಿದ್ದೇಗೌಡ ಮಾತನಾಡಿ, ಸ್ಠಾರ್ ಚಂದ್ರು ಅವರು ಸಾವಿರಾರು ಮಂದಿಗೆ ಉದ್ಯೋಗ ನೀಡಿದ್ದಾರೆ. ಚುನಾವಣೆಯಲ್ಲಿ ಅವರನ್ನು ಅಧಿಕ ಮತಗಳಿಂದ ಗೆಲ್ಲಿಸಿದರೆ ಇನ್ನಷ್ಟು ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸುತ್ತಾರೆ ಎಂದರು.ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯೊಂದಿಗೆ ರಾಜ್ಯದ ಜನರು ನೆಮ್ಮದಿ ಜೀವನ ನಡೆಸುತ್ತಿದ್ದಾರೆ. ಪ್ರತಿಯೊಬ್ಬ ಮುಖಂಡರು ಪ್ರತಿ ಮನೆಗಳಿಗೆ ಭೇಟಿ ನೀಡಿ ಪ್ರತಿಯೊಬ್ಬರಿಗೂ ಕಾಂಗ್ರೆಸ್ ಅಭಿವೃದ್ದಿ ಕುರಿತ ಗ್ಯಾರಂಟಿ ಯೋಜನೆಗಳ ಮನವರಿಸಿಕೆ ಮಾಡಿಕೊಡುವಂತೆ ಸೂಚನೆ ನೀಡಿದರು.
ನಂತರ ಪಟ್ಟಣದ ಹೊರವಲಯದಲ್ಲಿರುವ ಚಂದ್ರವನ ಆಶ್ರಮಕ್ಕೆ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಮೊದಲು ಶ್ರೀಕಾಶಿಚಂದ್ರಮೌಳೇಶ್ವರ ಸ್ವಾಮಿ ದೇವಲಯದಲ್ಲಿ ಪೂಜೆ ಸಲ್ಲಿಸಿ ಶ್ರೀಮಠದ ಪೀಠಾಧ್ಯಕ್ಷ ಡಾ. ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳಿಂದ ಆಶೀರ್ವಾದ ಪಡೆದರು.ಬಳಿಕ ಪಟ್ಟಣದ ನ್ಯಾಯಾಲಯದ ಅವರಣದ ವಕೀಲರ ಸಂಘದ ಕಚೇರಿಗೆ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಸಂಚಾಲಕ ಹಾಗೂ ವಕೀಲ ಎಂ.ಪುಟ್ಟೇಗೌಡ ನೇತೃತ್ವದಲ್ಲಿ ತೆರಳಿ ವಕೀಲರು ಮತ ನೀಡಿ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು.
ಈ ವೇಳೆ ಪುರಸಭೆ ಸದಸ್ಯರಾದ ಎಂ.ಎಲ್ ದಿನೇಶ್, ದಯಾನಂದ್, ನಂದೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ಎಂ. ನಂದೀಶ್, ಪುರಸಭೆ ಮಾಜಿ ಅಧ್ಯಕ್ಷರಾದ ಎಲ್. ನಾಗರಾಜು, ಶಿವಾಜಿರಾವ್, ಮಾಜಿ ಸದಸ್ಯರಾದ ಕೃಷ್ಣ, ಪಾರ್ವತಮ್ಮ, ಭಾಗ್ಯಮ್ಮ ಸೇರಿದಂತೆ ಮುಸ್ಲೀಂ ಮುಖಂಡರಾದ ಸಲೀಂ, ಅಜೀಜ್‌ಖಾನ್, ಕಾಬೂಲ್, ಇರ್ಷಾದ್ ಪಾಷ ಇತರ ಪಕ್ಷದ ಕಾರ್ಯಕರ್ತರು ಮುಖಂಡರು ಇದ್ದರು.