ಸಾರಾಂಶ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಗೆಲುವು ಸಾಧಿಸುತ್ತಿದ್ದಂತೆಯೇ ಚನ್ನಗಿರಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಸಂತೆ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಚನ್ನಗಿರಿ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಗೆಲುವು ಸಾಧಿಸುತ್ತಿದ್ದಂತೆಯೇ ಚನ್ನಗಿರಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಸಂತೆ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಪುರಸಭಾ ಸದಸ್ಯ ಜಿ.ನಿಂಗಪ್ಪ ಮಾತನಾಡಿ, 20 ವರ್ಷಗಳಿಂದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ ಅಧಿಕಾರ ನಡೆಸಿದೆ. ಬಿಜೆಪಿ ಸರ್ಕಾರದ ದುರಾಡಳಿತ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳೇ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆಯಾಗಿದೆ ಎಂದರು.ಸೈಯ್ಯದ್ ಗೌಸ್ ಪೀರ್ ಮಾತನಾಡಿ, ಕಾಂಗ್ರೆಸ್ ಜನಪರ ಆಡಳಿತ ಗಮನಿಸಿದ ಮತದಾರರು ಪಕ್ಷದ ಅಭ್ಯರ್ಥಿಗೆ ಅಧಿಕ ಮತಗಳನ್ನು ನೀಡಿ ಜಯ ಗಳಿಸುವಂತೆ ಮಾಡಿದ್ದಾರೆ. ಈ ಗೆಲುವಿನಿಂದ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಮತ್ತಷ್ಟು ವೃದ್ಧಿಸಿದೆ ಎಂದರು.
ಮುಖಂಡರಾದ ಸೈಯದ್ ಅಫ್ರೋಜ್, ತನ್ವೀರ್, ಖದೀರ್, ಇರ್ಫಾನ್, ನೌಷಾದ್, ಯೂಸೂಫ್, ಸಿದ್ದೀಕ್, ರಾಜು, ಅಫ್ತಾಬ್, ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.- - - -4ಕೆಸಿಎನ್‌ಜಿ1: