ಸಂಡೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಂಸದೆ ಡಾ.ಪ್ರಭಾ

| Published : Nov 11 2024, 12:56 AM IST / Updated: Nov 11 2024, 12:57 AM IST

ಸಂಡೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಂಸದೆ ಡಾ.ಪ್ರಭಾ
Share this Article
  • FB
  • TW
  • Linkdin
  • Email

ಸಾರಾಂಶ

ಸಂಡೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಮ್ಮ ತುಕಾರಾಂ ಪರವಾಗಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನೆಮನೆಗೆ ತೆರಳಿ ಮತಯಾಚನೆ ಮಾಡಿದ್ದಾರೆ.

ದಾವಣಗೆರೆ: ಸಂಡೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಮ್ಮ ತುಕಾರಾಂ ಪರವಾಗಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.

ಸಂಡೂರು ಕ್ಷೇತ್ರದ ಧರ್ಮಾಪುರ, ಭುಜಂಗನಗರ, ಲಕ್ಷ್ಮೀಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬಹಿರಂಗ ಸಭೆ ನಡೆಸಿ, ಕಾಂಗ್ರೆಸ್ ಅಭ್ಯರ್ಥಿಪರ ಪ್ರಚಾರ ಮಾಡಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಹಾಗೂ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಎಲ್ಲರ ಅಭಿವೃದ್ಧಿಗೆ ಪೂರಕವಾಗಿವೆ. ರಾಜ್ಯದಲ್ಲಿ ಜನಪರ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಪಕ್ಷದ ಹಸ್ತದ ಗುರುತಿಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.

ಸಂಡೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ರಾಜ್ಯದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸದಾ ಸಿದ್ಧವಿದೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗುರುತಿಗೆ ಮತ ನೀಡುವ ಮೂಲಕ ಪಕ್ಷವನ್ನು ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

- - -

(** ಈ ಫೋಟೋ-ಕ್ಯಾಪ್ಷನ್‌ ಪ್ಯಾನೆಲ್‌ಗೆ ಬಳಸಿ)-10ಕೆಡಿವಿಜಿ36, 37:

ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಮ್ಮ ತುಕಾರಾಂ ಪರವಾಗಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮತದಾರರ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.