ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶಾಸಕ ಎಂ.ವೈ. ಪಾಟೀಲ ಮನವಿ

| Published : May 28 2024, 01:02 AM IST

ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶಾಸಕ ಎಂ.ವೈ. ಪಾಟೀಲ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಈಶಾನ್ಯ ಪದವಿಧರರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ ಪಾಟೀಲ್ ಅವರನ್ನು ಗೆಲ್ಲಿಸಿ ಎಂದು ಶಾಸಕ ಎಂ.ವೈ. ಪಾಟೀಲ್ ಮನವಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಚವಡಾಪುರ

ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಈಶಾನ್ಯ ಪದವಿಧರರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ ಪಾಟೀಲ್ ಅವರನ್ನು ಗೆಲ್ಲಿಸಿ ಎಂದು ಶಾಸಕ ಎಂ.ವೈ. ಪಾಟೀಲ್ ಮನವಿ ಮಾಡಿದ್ದಾರೆ.

ಅಫಜಲ್ಪುರ ಪಟ್ಟಣದ ನ್ಯಾಷನಲ್ ಫಂಕ್ಷನ ಹಾಲನಲ್ಲಿ ನಡೆದ ಪ್ರಚಾರ ಸಮಾರಂಭದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ನಮ್ಮ ಪಕ್ಷದ ಪ್ರಭಲ ಸರ್ಕಾರವಿದೆ. ಈಗ ಪರಿಷತ್ತಿನಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಶಿಕ್ಷಕರ ಸಮಸ್ಯೆಗಳಿಗೆ ಮತ್ತು ಬೇಡಿಕೆಗಳಿಗೆ ಹಂತಹಂತವಾಗಿ ಶಾಶ್ವತ ಪರಿಹಾರ ನೀಡಲಾಗುತ್ತದೆ ಎಂದ ಅವರು ಹೊಸ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ಮರುಜಾರಿಗೆ ತರಲಾಗುತ್ತದೆ. ಸರ್ಕಾರಿ ನೌಕರರಿಗೆ 7ನೇ ವೇತನ ಜಾರಿ ಮಾಡಲಾಗುತ್ತದೆ, ಪದವಿಧರರ ಸಮಸ್ಯೆಗಳಿಗೆ ಪರಿಹಾರ, ಉದ್ಯೋಗಗಳ ಭರ್ತಿ ಸೇರಿದಂತೆ ಅನೇಕ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲಾಗುತ್ತದೆ ಹೀಗಾಗಿ ಎಲ್ಲರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಭಾರಿ ಬಹುಮತದಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.

ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಮಾತನಾಡಿ ದೇಶದಲ್ಲಿಗ ಇಂಡಿಯಾ ಕೂಟದ ಗಾಳಿ ಜೋರಾಗಿದೆ. ಸೋಲಿನ ಹತಾಶೆಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಜಾತಿ, ಧರ್ಮಗಳ ಮಟ್ಟಕ್ಕೆ ಇಳಿದು ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ ಈ ಬಾರಿ 28 ಲೋಕಸಭೆ ಸ್ಥಾನಗಳ ಪೈಕಿ ಕಲ್ಯಾಣ ಕರ್ನಾಟಕದ 4 ಸ್ಥಾನ ಸೇರಿ ರಾಜ್ಯದಲ್ಲಿ ಕಾಂಗ್ರೆಸ್ 18 ಸ್ಥಾನಗಳನ್ನು ಗೆಲ್ಲಲಿದೆ ಎಂದ ಅವರು ಈಗ ಮೇಲ್ಮನೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಗಲು ಚಂದ್ರಶೇಖರ ಪಾಟೀಲ್ ಅವರನ್ನು ಗೆಲ್ಲಿಸಿ ಮನವಿ ಮಾಡಿದರು.

ಅರುಣಕುಮಾರ ಪಾಟೀಲ, ಸುರೇಶ ತಿಬಶೆಟ್ಟಿ, ಪ್ರಕಾಶ ಜಮಾದಾರ, ಮಲ್ಲಿಕಾರ್ಜುನ ದುತ್ತರಗಾಂವ ಮಾತನಾಡಿ ಪರಿಷತ್ ಚುನಾವಣೆಯಲ್ಲಿ 2018 ರಲ್ಲಿ 1210 ಮತದಾರರಿದ್ದರು. ಈ ಬಾರಿ 2230 ಮತದಾರರಿದ್ದಾರೆ. 4 ಮತಗಟ್ಟೆಗಳಿದ್ದು ಚವಡಾಪುರ, ಮಲ್ಲಾಬಾದ, ಅಫಜಲ್ಪುರ, ಕರ್ಜಗಿ ಮತಗಟ್ಟೆಗಳಿವೆ ಎಲ್ಲರೂ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಅವರಿಗೆ ಮತ ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡಿ ಎಂದರು.

ಈ ಸಂದರ್ಭದಲ್ಲಿ ಮತೀನ ಪಟೇಲ, ಸಿದ್ದಾರ್ಥ ಬಸರಿಗಿಡ, ರಮೇಶ ಪೂಜಾರಿ, ಶರಣು ಕುಂಬಾರ, ಶಿವಾನಂದ ಗಾಡಿಸಾಹುಕಾರ, ಖೇಮಸಿಂಗ, ಎ.ಎಸ್ ಬಿರಾದಾರ, ಚಂದು ಕರ್ಜಗಿ, ಜ್ಯೋತಿ ಮರಗೋಳ, ರೇಣುಕಾ ಸಿಂಗೆ ಸೇರಿದಂತೆ ಅನೇಕರು ಇದ್ದರು.