ಮಡಿಕೇರಿ: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹಾಗೂ ಕೇರಳ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ನಿಂದ ಮಡಿಕೇರಿಯಲ್ಲಿ ಸೋಮವಾರ ಸಂಭ್ರಮ ಆಚರಿಸಲಾಯಿತು.ನಗರದ ಇಂದಿರಾ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಗೋಣಿಕೊಪ್ಪದಲ್ಲಿ ಸಂಭ್ರಮಾಚರಣೆ: ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿ, ದಾವಣಗೆರೆ ದಕ್ಷಿಣದಲ್ಲಿ ನಡೆದ ಉಪ ಚುನಾವಣೆಯಲ್ಲಿ ಸಮರ್ಥ ಶ್ಯಾಮನೂರು ಗೆಲುವಿನ ಹಿನ್ನೆಲೆಯಲ್ಲಿ ಗೋಣಿಕೊಪ್ಪ ನಗರ ಕಾಂಗ್ರೆಸ್ ವತಿಯಿಂದ ಸಂಭ್ರಮ ಆಚರಿಸಲಾಯಿತು.
ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಹಾಗೂ ಗ್ರಾಪಂ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ನೇತೃತ್ವದಲ್ಲಿ ನಗರದ ಪ್ರಮುಖರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಘೋಷಣೆಗಳನ್ನು ಕೂಗಿ ಸಂಭ್ರಮಾಚರಿಸಿದರು.ಕಾಂಗ್ರೆಸ್‌ನ ಪಿ.ಕೆ. ಪ್ರವೀಣ್ ಮತ್ತು ಕೆಡಿಸಿಸಿ ಸದಸ್ಯ ಸಮ್ಮದ್ ಕಾಂಗ್ರೆಸ್ ಪಕ್ಷದ ಗೆಲುವಿನ ಹಾದಿ ಬಗ್ಗೆ ಮಾತನಾಡಿದರು. ಕಾಂಗ್ರೆಸ್‌ನ ಹಿರಿಯ ಮುಖಂಡ ಕೊಳ್ಳಿಮಾಡ ಅಜಿತ್ ಅಯ್ಯಪ್ಪ, ಗ್ರಾಪಂ ಉಪಾಧ್ಯಕ್ಷ ಮಂಜುಳ ಎಂ., ಗ್ಯಾರಂಟಿ ಅನುಷ್ಟಾನ ಸಮಿತಿ ತಾಲೂಕು ಸದಸ್ಯ ಖಾಲಿದ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಂಕಿತ್, ಪ್ರಮುಖರಾದ ರಾಜಶೇಖರ್, ನಾರಾಯಣ ಸ್ವಾಮಿ ನಾಯ್ಡು, ಧನಲಕ್ಷ್ಮಿ ಇದ್ದರು.