ಕಾಂಗ್ರೆಸ್‌ ಕೇಂದ್ರದ ಗ್ಯಾರಂಟಿ ಕಾರ್ಡ್‌ ವಿತರಣೆಗೆ ಚಾಲನೆ: ಅಶೋಕ ಖೇಣಿ

| Published : Apr 20 2024, 01:03 AM IST

ಸಾರಾಂಶ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮನ್ನಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರದ ಗ್ಯಾರಂಟಿ ಕಾರ್ಡ್‌ ವಿತರಣೆಗೆ ಬೀದರ್‌ ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಅಶೋಕ ಖೇಣಿ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೀದರ್‌

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮನ್ನಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಕೇಂದ್ರದ ಗ್ಯಾರಂಟಿ ಕಾರ್ಡ್‌ ವಿತರಣೆಗೆ ಬೀದರ್‌ ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಅಶೋಕ ಖೇಣಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಖೇಣಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿರುವ ರಾಜ್ಯ ಸರ್ಕಾರದ ಐದು ಗ್ಯಾರಂಟಿ ರಾಜ್ಯದಲ್ಲಿ ಈಗಾಗಲೇ ಜಾರಿಯಾಗಿದೆ. ಬಡ ಸಾಮಾನ್ಯ ಜನರಿಗೆ ಅನುಕೂಲವಾಗಿದೆ. ಈ ಬಾರಿ ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದರೆ 5 ಗ್ಯಾರಂಟಿ ಘೊಷಣೆ ಮಾಡಿದೆ ಎಂದರು.

ಯುವ ನ್ಯಾಯದಡಿ ವರ್ಷಕ್ಕೆ 1 ಲಕ್ಷ ವೇತನದ ಪ್ರತಿಯೊಬ್ಬ ವಿದ್ಯಾವಂತ ಯುವಕನಿಗೆ ಮೊದಲ ಉದ್ಯೋಗದ ಗ್ಯಾರಂಟಿ. ಮಹಿಳಾ ನ್ಯಾಯದಡಿ ವರ್ಷಕ್ಕೆ 1 ಲಕ್ಷ ರು. ಪ್ರತಿ ಬಡ ಕುಟುಂಬದ ಮಹಿಳೆಗೆ, ರೈತ ನ್ಯಾಯದಡಿ ಸಾಲ ಮನ್ನಾ ಹಾಗೂ ಸ್ವಾಮಿನಾಥನ್ ಆಯೋಗದ ಸೂತ್ರದ ಪ್ರಕಾರ ಎಂಎಸ್ಪಿ ಕಾನೂನು ಸ್ಥಾನಮಾನ ಮತ್ತು ಶ್ರಮಿಕ ನ್ಯಾಯದಡಿ ದಿನಕ್ಕೆ 400 ವೇತನ, ಮನರೇಗಾ ಸೇರಿ ರಾಷ್ಟ್ರೀಯ ಕನಿಷ್ಟ ವೇತನ ಪಾಲುದಾರಿಕೆ ನ್ಯಾಯ, ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗಳಾಗಿವೆ.

ಈ ಐದು ಗ್ಯಾರಂಟಿ ಕೇಂದ್ರದಲ್ಲಿ ಸರ್ಕಾರ ಬಂದರೆ ಜಾರಿಯಾಗಲಿವೆ ಎಂದ ಅವರು, ನಮ್ಮ ಪಕ್ಷದ ಅಭ್ಯರ್ಥಿ ಸಾಗರ ಖಂಡ್ರೆಗೆ ಹೆಚ್ಚಿನ ಮತ ನೀಡುವಂತೆ ಮನವಿ ಮಾಡಿದರು.

ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅಮೃತರಾವ ಚಿಮಕೋಡೆ ಪ್ರಾಸ್ತಾವಿಕ ಮಾತನಾಡಿದರು.

ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿನಾಕ್ಷಿ ಸಂಗ್ರಾಮ, ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಚಂದ್ರಶೇಖರ್ ಚನಶಟ್ಟಿ, ಕೆಪಿಸಿಸಿ ಸದಸ್ಯ ಹಾಗೂ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ದಕ್ಷಿಣ ಕ್ಷೇತ್ರದ ಅಧ್ಯಕ್ಷ ರಾಜಕುಮಾರ್ ಮಡಿಕಿ, ಜಿಲ್ಲಾ ಸದಸ್ಯ ಸಾಜೀದ್ ಪಾಶಾ, ಗ್ರಾಪಂ ಉಪಾಧ್ಯಕ್ಷ ಸಮದ್ ಕಮಠಾಣ, ಮುಖಂಡರಾದ ನೂರೊದ್ದಿನ, ತಾಜೋದ್ದಿನ್ ಮನ್ನಳಿ, ಶಂಕರ ವೀನೋದ ಚನ್ನಬಸವ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಸೇರಿ ಅನೇಕರಿದ್ದರು.