ಸಾರಾಂಶ
-ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಶತಮಾನೋತ್ಸವ ಪ್ರಯುಕ್ತ ಪೂರ್ವಭಾವಿ ಸಭೆ
---------ಕನ್ನಡಪ್ರಭ ವಾರ್ತೆ ಯಾದಗಿರಿ
ಡಿ.26, 27ರಂದು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆಯುವ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಶತಮಾನೋತ್ಸವ ಐತಿಹಾಸಿಕ ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಹಕರಿಸಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಮನವಿ ಮಾಡಿದರು.ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಈ ಹಿಂದೆ ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ 100 ವರ್ಷಗಳ ಹಿಂದೆ ಎಐಸಿಸಿ ಕಾಂಗ್ರೆಸ್ ಸಮಾವೇಶ ನಡೆಯಿತು. ನಂತರ ಈಗ ನಡೆಯುತ್ತಿರುವ ಮಹತ್ವದ ಕಾರ್ಯಕ್ರಮ ನಮ್ಮೆಲ್ಲರಿಗೆ ಸ್ಪೂರ್ತಿ ನೀಡಲಿದೆ ಎಂದು ಹೇಳಿದರು.
ಈಗಾಗಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳನ್ನು ಜನರಿಗೆ ನೀಡಿದ ಪರಿಣಾಮ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಪಕ್ಷದ ವರ್ಚಸ್ಸು ಹೆಚ್ಚಾಗಿದೆ ಎಂದರು.ಮಾಜಿ ಸಚಿವ ಹಾಗೂ ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಮಾತನಾಡಿ, ಡಾ. ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ನಂತರ ದೇಶದಲ್ಲಿ ಕಾಂಗ್ರೆಸ್ ಪಕ್ಷ ಉತ್ತಮವಾಗಿ ಸಂಘಟನೆಯಾಗಿದೆ. ಅವರ ನೇತೃತ್ವದಲ್ಲಿ ಎಐಸಿಸಿ ಸಮಾವೇಶ ನಡೆಯುತ್ತಿರುವುದರಿಂದ ಬರುವ ದಿನಗಳಲ್ಲಿ ಪಕ್ಷ ಸಂಘಟನೆಗೆ ನೀಲಿ ನಕ್ಷೆ ಸಿದ್ಧವಾಗಿ ಪ್ರಾಮಾಣಿಕವಾಗಿ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.
ದೇಶದಲ್ಲಿ ಪ್ರಧಾನಿ ಮೋದಿಯವರ ಜನವಿರೋಧಿ ಆಡಳಿತದಿಂದ ಜನರು ಬೇಸತ್ತಿದ್ದಾರೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಯುವಕರು ಕೂಡ ನಿರಾಶರಾಗಿದ್ದಾರೆ. ಬಿಜೆಪಿ ಪಕ್ಷದ ವರ್ಚಸ್ಸು ಕುಸಿದಿದೆ. ಬರುವ ದಿನಗಳಲ್ಲಿ ಕಾಂಗ್ರೆಸ್‌ಗೆ ಲಾಭವಾಗಿ ಖರ್ಗೆಯವರು ಪ್ರಧಾನ ಮಂತ್ರಿಯಾಗುವ ಯೋಗವಿದೆ ಎಂದು ಹೇಳಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಪಾಟೀಲ್ ಅನಪೂರ ಮಾತನಾಡಿ, ಡಿ.27 ರಂದು ನಡೆಯುವ ಸಮಾವೇಶಕ್ಕೆ ಜಿಲ್ಲೆಯಿಂದ 500 ಕ್ಕೂ ಹೆಚ್ಚು ಮುಖಂಡರು ಹಾಗೂ ಪ್ರಮುಖ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಗುರುಮಠಕಲ್ ಮತಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ರಾಜಗೋಪಾಲರೆಡ್ಡಿ ಚಿದಾನಂದಪ್ಪ ಕಾಳೆಬೆಳಗುಂದಿ, ಡಾ. ಭೀಮಣ್ಣ ಮೇಟಿ, ಸಾಯಿಬಣ್ಣ ಬೋರಬಂಡ, ವಿನಾಯಕ ಮಾಲಿ ಪಾಟೀಲ್, ಚಂದ್ರಶೇಖರ ದಂಡಿನ್, ಶರಣಪ್ಪ ಮಾನೇಗರ್, ವಿಶ್ವನಾಥ ನೀಲಹಳ್ಳಿ, ಸ್ಯಾಮಸನ್ ಮಾಳಿಕೇರಿ, ಕೃಷ್ಣ ಚಪೇಟ್ಲಾ, ನಿರಂಜನರೆಡ್ಡಿ, ನಿಂಗರಾಜ ಬಾಚಿಮಟ್ಟಿ, ಸುದರ್ಶನ ನಾಯಕ್, ಮಲ್ಲಣ್ಣ ದಾಸನಕೇರಿ, ಬಸವರಾಜಪ್ಪ ಬಾಗ್ಲಿ, ಮಂಜುಳಾ ಗೂಳಿ, ಕಳಸಪ್ಪ ಸಾವೂರ, ವೈಜನಾಥರೆಡ್ಡಿ ಹತ್ತಿಕುಣಿ, ಸಂಜೀವ ಕುಮಾರ ಕಾವಲಿ, ಮಲ್ಲಿಕಾರ್ಜುನ ಈಟೆ, ವೆಂಕಟರೆಡ್ಡಿ ವನಕೇರಿ, ಲಚಮರೆಡ್ಡಿ, ನೀಲಕಂಠ ಬಡಿಗೇರ, ಭೀಮರಾಯ ಠಾಣಗುಂದಿ, ಹೊನ್ನೇಶ ಬಳಿಚಕ್ರ ಸೇರಿದಂತೆ ಜಿಲ್ಲೆಯ ಮುಖಂಡರು ಪ್ರಮುಖ ಕಾರ್ಯಕರ್ತರು ಇದ್ದರು.------
ಫೋಟೊ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೆಳಗಾವಿಯಲ್ಲಿ ನಡೆಯುವ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಶತಮಾನೋತ್ಸವ ನಿಮಿತ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಮಾತನಾಡಿದರು.21ವೈಡಿಆರ್2