ಸಾರಾಂಶ
ನಾಪೋಕ್ಲು ಕೊಡವ ಸಮಾಜದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಿತು. ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಿದ್ದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ನಮಗೆ ಪೊಳ್ಳು ಭರವಸೆಗಳು ಬೇಕಾಗಿಲ್ಲ. ಭ್ರಷ್ಟಾಚಾರ ರಹಿತ ಸರ್ಕಾರವನ್ನು ಜನತೆ ಆಯ್ಕೆ ಮಾಡಬೇಕಿದೆ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.ನಾಪೋಕ್ಲು ಕೊಡವ ಸಮಾಜದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಅವರು ಮಾತನಾಡಿದರು.
ಈ ಬಾರಿ ಕೊಡಗು ಮೈಸೂರು ಕ್ಷೇತ್ರದಲ್ಲಿ ಸಂಸತ್ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಅಧಿಕ ಮತಗಳಿಂದ ಗೆಲ್ಲಿಸುವಂತೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮನವಿ ಮಾಡಿದರು.ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಮುಂಬರುವ ಚುನಾವಣೆ ಅಧಿಕಾರ ಮತ್ತು ಸಿದ್ದಾಂತದ ನಡುವಿನ ಸವಾಲು ಆಗಿದ್ದು ಪ್ರಜಾಪ್ರಭುತ್ವಕ್ಕೆ ಗೌರವ ನೀಡುವ ಮತ್ತು ಸಂವಿಧಾನವನ್ನು ಪಾಲಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಕರೆ ನೀಡಿದರು. ಅಭ್ಯರ್ಥಿ ಎಂ.ಲಕ್ಷಣ್ ಗೌಡ, ಪಶುಸಂಗೋಪನ ಇಲಾಖೆ ಸಚಿವ ಕೆ.ವೆಂಕಟೇಶ್ ಮಾತನಾಡಿದರು.
ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ, ಮಾಜಿ ಎಂ.ಎಲ್.ಸಿ. ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷ ಸುರಯ್ಯ ಅಬ್ರಹಾಂ, ಅಕ್ರಮ ಸಕ್ರಮ ಸಮಿತಿಯ ತಾಲೂಕು ಅಧ್ಯಕ್ಷ ನೆರವಂಡ ಉಮೇಶ್, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಎಚ್. ಅಬ್ದುಲ್ ರಹಿಮಾನ್, ವಲಯ ಅಧ್ಯಕ್ಷ ಮಾಚೆಟ್ಟಿರ ಕುಶು ಕುಶಾಲಪ್ಪ ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಾಜೇಶ್ವರಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ, ಉಪಾಧ್ಯಕ್ಷೆ ಹೇಮಾ ಅರುಣ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಬೊಳ್ಳಂಡ ಶರಿ, ಕೆಡಿಪಿ ಸದಸ್ಯ ಬಾಚಮಂಡ ಲವ ಚಿಣ್ಣಪ್ಪ ಕರ್ನಾಟಕ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಹ್ಯಾರಿಸ್ ಕುಂಜಿಲ, ಯೂತ್ ಕಾಂಗ್ರೆಸ್ ಅಧ್ಯಕ್ಷ ಪರವಂಡ ಸಿರಾಜ್ ವಲಯ ಅಧ್ಯಕ್ಷ ಮಿರ್ಷಾದ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಹಲವರು ಪಕ್ಷ ಸೇರ್ಪಡೆಗೊಂಡರು. ಅವರನ್ನು ಎ.ಎಸ್. ಪೊನ್ನಣ್ಣ, ಪಕ್ಷದ ಶಾಲು ಹೊದಿಸಿ ಬಾವುಟ ನೀಡುವ ಮುಖಾಂತರ ಪಕ್ಷಕ್ಕೆ ಸೇರ್ಪಡೆಗೊಳಿಸಿದರು.