ನಾಳೆ ವಿರಾಜಪೇಟೆ, ನಾಪೋಕ್ಲು, ಕುಶಾಲನಗರದಲ್ಲಿ ಕಾಂಗ್ರೆಸ್ ಸಮಾವೇಶ

| Published : Mar 30 2024, 12:56 AM IST

ನಾಳೆ ವಿರಾಜಪೇಟೆ, ನಾಪೋಕ್ಲು, ಕುಶಾಲನಗರದಲ್ಲಿ ಕಾಂಗ್ರೆಸ್ ಸಮಾವೇಶ
Share this Article
  • FB
  • TW
  • Linkdin
  • Email

ಸಾರಾಂಶ

ವಿರಾಜಪೇಟೆ ಕೊಡವ ಸಮಾಜದಲ್ಲಿ ಬೆಳಗ್ಗೆ 10.30 ಗಂಟೆಗೆ, ನಾಪೋಕ್ಲು ಕೊಡವ ಸಮಾಜದಲ್ಲಿ ಮಧ್ಯಾಹ್ನ 1.30ಕ್ಕೆ ಮತ್ತು ಕುಶಾಲನಗರದ ಕಾರು ನಿಲ್ದಾಣದಲ್ಲಿ ಸಂಜೆ 5 ಗಂಟೆಗೆ ಸಮಾವೇಶ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಪ್ರತಿಷ್ಠೆಯ ಕಣವಾಗಿರುವ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಗುರಿ ಹೊಂದಿರುವ ಕಾಂಗ್ರೆಸ್ ಪ್ರಚಾರ ಕಾರ್ಯವನ್ನು ಬಿರುಸುಗೊಳಿಸಿದ್ದು, ಮಾ.31ರಂದು ವಿರಾಜಪೇಟೆ, ನಾಪೋಕ್ಲು ಮತ್ತು ಕುಶಾಲನಗರದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು ತಮ್ಮ ಅಧ್ಯಕ್ಷತೆಯಲ್ಲಿ ವಿರಾಜಪೇಟೆ ಕೊಡವ ಸಮಾಜದಲ್ಲಿ ಬೆಳಗ್ಗೆ 10.30 ಗಂಟೆಗೆ, ನಾಪೋಕ್ಲು ಕೊಡವ ಸಮಾಜದಲ್ಲಿ ಮಧ್ಯಾಹ್ನ 1.30ಕ್ಕೆ ಮತ್ತು ಕುಶಾಲನಗರದ ಕಾರು ನಿಲ್ದಾಣದಲ್ಲಿ ಸಂಜೆ 5 ಗಂಟೆಗೆ ಸಮಾವೇಶ ನಡೆಯಲಿದೆ ಎಂದು ಹೇಳಿದ್ದಾರೆ.ಸಮಾವೇಶದಲ್ಲಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್‌ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಭೋಸರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷರು, ಶಾಸಕರು ಹಾಗೂ ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ ತನ್ವೀರ್ ಸೇಠ್, ಸಚಿವರಾದ ಎಚ್.ಸಿ.ಮಹದೇವಪ್ಪ ಹಾಗೂ ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು, ಮಾಜಿ ಶಾಸಕರು, ಮುಂಚೂಣಿ ಘಟಕಗಳ ಅಧ್ಯಕ್ಷರು, ಡಿಸಿಸಿ ಪದಾಧಿಕಾರಿಗಳು, ಎಲ್ಲಾ ಚುನಾಯಿತ ಜನಪ್ರತಿನಿಧಿಗಳು, ಬೂತ್ ಅಧ್ಯಕ್ಷರು, ವಲಯ ಕಾಂಗ್ರೆಸ್ ಅಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.ಜಿಲ್ಲಾದ್ಯಂತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್‌ ಗೌಡ ಅವರಿಗೆ ಉತ್ತಮ ಜನಬೆಂಬಲ ದೊರೆಯುತ್ತಿದ್ದು, ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ಗೆದ್ದಂತೆ ಈ ಬಾರಿ ಲೋಕಸಭಾ ಕ್ಷೇತ್ರವನ್ನು ಕೂಡ ಗೆಲ್ಲುವುದಾಗಿ ಧರ್ಮಜ ಉತ್ತಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಇಬ್ಬರು ಶಾಸಕರು ಕಾಂಗ್ರೆಸ್ಸಿಗರೇ ಆಗಿರುವುದರಿಂದ, ಸಂಸದರು ಕೂಡ ಕಾಂಗ್ರೆಸ್ಸಿಗರೇ ಆದರೆ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ. ಈ ಬಗ್ಗೆ ಜನರಿಗೂ ಅರಿವಿದ್ದು, ಅತ್ಯಧಿಕ ಮತಗಳ ಅಂತರದಿಂದ ಲಕ್ಷ್ಮಣ್‌ ಗೌಡ ಗೆಲುವು ಸಾಧಿಸಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.