3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ: ಸಿವಿಸಿ

| Published : Oct 27 2024, 02:16 AM IST

ಸಾರಾಂಶ

ಉಪಚುನಾವಣೆ ನಡೆಯಲಿರುವ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಮತಕ್ಷೇತ್ರಗಳಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ನಾಯಕರು ಹಾಗೂ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ

ಕೊಪ್ಪಳ:

ಉಪಚುನಾವಣೆ ನಡೆಯಲಿರುವ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಮತಕ್ಷೇತ್ರಗಳಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ನಾಯಕರು ಹಾಗೂ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಎನ್‌ಡಿಎ ಒಕ್ಕೂಟದ ಅಭ್ಯರ್ಥಿಗಳ ಗೆಲುವಿಗೆ ಮಾಡಬೇಕಾದ ಕೆಲಸಗಳ ಬಗ್ಗೆ ಸಮಗ್ರವಾದ ಚರ್ಚೆ ನಡೆಯಿತು. ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಮಾಡಬೇಕಾದ ಕೆಲಸಗಳ ಬಗ್ಗೆ ಮಾಹಿತಿ ನೀಡಲಾಯಿತು. ರಾಜ್ಯ ನಾಯಕರ ಅಪೇಕ್ಷೆಯ ಮೇರೆಗೆ ಕೊಪ್ಪಳದಿಂದ ನಾಯಕರು ಮೂರು ಕ್ಷೇತ್ರಗಳಲ್ಲಿ ವ್ಯಾಪಕವಾದ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

3 ಕ್ಷೇತ್ರಗಳಲ್ಲಿ 2 ಪಕ್ಷಗಳ ಮತಗಳು ವಿಲೀನಗೊಂಡರೆ ಎನ್‌ಡಿಎ ಒಕ್ಕೂಟದ ಅಭ್ಯರ್ಥಿಗಳ ಗೆಲುವು ಖಚಿತ. ಮತದಾರರು ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ರೋಸಿ ಹೋಗಿದ್ದಾರೆ. ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ ಎಂದು ತಿಳಿಸಿದ್ದಾರೆ.

ಕೊಪ್ಪಳದಲ್ಲಿ ಪಕ್ಷದ ನಾಯಕರ ಹಾಗೂ ಕಾರ್ಯಕರ್ತರ ಸಭೆ ನಡೆಸಿ ಕಾರ್ಯಕ್ರಮಕ್ಕೆ ಬೇಕಾದ ಕೆಲಸಗಳ ಮಾಹಿತಿ ನೀಡಲಾಗುವುದು ಎಂದು ಹೇಳಿದ್ದಾರೆ.31ರಂದು ಜಿಲ್ಲಾ ಮಟ್ಟದ ಈಜು ಸ್ಪರ್ಧೆ:

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯನ್ನು ಅ. 31ರಂದು ಬೆಳಗ್ಗೆ 8 ಗಂಟೆಗೆ ನಗರದ ಗದಗ ರಸ್ತೆಯಲ್ಲಿರುವ ಜಿಲ್ಲಾ ಕ್ರೀಡಾಂಗಣದ ಈಜುಕೊಳದಲ್ಲಿ ಆಯೋಜಿಸಲಾಗಿದ್ದು, ಆಸಕ್ತ ಈಜುಗಾರರು, ಈಜುಪಟುಗಳು ತಮ್ಮ ಹೆಸರನ್ನು ನೋದಣಿ ಮಾಡಿಕೊಳ್ಳಬೇಕು.ಈಜು ಸ್ಪರ್ಧೆಗಳ ವಿವರ:ಫ್ರೀಸ್ಟೈಲ್ ಈಜು ಪುರುಷರಿಗೆ ಮತ್ತು ಮಹಿಳೆಯರಿಗೆ 25 ಮೀ ಹಾಗೂ 50 ಮೀ, ಬ್ಯಾಕ್ ಸ್ಟೋಕ್ ಈಜು ಪುರುಷರಿಗೆ 25 ಮೀ 50 ಮೀ ಮತ್ತು ಮಹಿಳೆಯರಿಗೆ 25 ಮೀ, ಬ್ರೆಸ್ಟ್ ಸ್ಟೋಕ್ ಈಜು ಪುರುಷರಿಗೆ 25 ಮೀ 50 ಮೀ ಮತ್ತು ಮಹಿಳೆಯರಿಗೆ 25 ಮೀ, ಬಟರ್ ಪ್ಲೈ ಈಜು ಪುರುಷರಿಗೆ 25 ಮೀ 50 ಮೀ ಮತ್ತು ಮಹಿಳೆಯರಿಗೆ 25 ಮೀ ಸ್ಪರ್ಧೆ ನಡೆಯಲಿದೆ.

ಸ್ಪರ್ಧೆಯಲ್ಲಿ ಭಾಗವಹಿಸುವ ಈಜುಗಾರರು ಅ. 31ರ ಬೆಳಗ್ಗೆ 7 ಗಂಟೆಗೆ ಇರಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 7026459937 ಹಾಗೂ 8310802801ಗೆ ಸಂಪರ್ಕಿಸುವಂತೆ ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.