ಸಾರಾಂಶ
ಶಿರಸಿ: ಬೆಂಗಳೂರಿನ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ಅವರು ಪರಿಶಿಷ್ಟ ಜಾತಿ ಮತ್ತು ಒಕ್ಕಲಿಗರು, ಮಹಿಳೆಯರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಲಂಚಕ್ಕೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗ ಮತ್ತು ತಾಲೂಕು ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಶಿರಸಿ ಡಿಎಸ್‌ಪಿ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಯಿತು.ಬಿಜೆಪಿ ಶಾಸಕ ಮುನಿರತ್ನ ಅವರು ಬಿಬಿಎಂಪಿ ಗುತ್ತಿಗೆದಾರರ ಚೆಲುವರಾಜು ನಡುವೆ ಹಣಕಾಸಿನ ವಿಚಾರವಾಗಿ ಮಾತುಕತೆ ವೇಳೆ ಮಾತನಾಡಿದ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವಾಚ್ಯವಾಗಿ ನಿಂದಿಸಿ, ಪರಿಶಿಷ್ಟ ಜಾತಿ ಮತ್ತು ಒಕ್ಕಲಿಗ ಸಮುದಾಯದ ಮಹಿಳೆಯರ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ, ಗಡಿಪಾರು ಮಾಡಬೇಕು. ಅವರಿಗೆ ಜಾಮೀನು ಸಿಗದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ದೊಡ್ಮನಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಸಂಚಾಲಕಿ ಗಾಯತ್ರಿ ನೇತ್ರೆಕರ್, ಮಾಧವರಾವ್ ರೇವಣಕರ್, ತಾಲೂಕು ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗ ಅಧ್ಯಕ್ಷ ಚಂದ್ರಕಾಂತ ರೇವಣಕರ್, ಜಿಲ್ಲಾ ಸಮಿತಿ ಉಪಾಧ್ಯಕ್ಷ ರಘು ಕಾನಡೆ, ಜಿಲ್ಲಾ ಮಾಧ್ಯಮ ವಕ್ತಾರ ಅಮರ ನೇರಲಕಟ್ಟೆ, ತಾಲೂಕು ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಗಣೇಶ ದಾವಣಗೆರೆ, ಹಿರಿಯ ಕಾಂಗ್ರೆಸ್ ಸುಭಾಷ್ ಕಾನಡೆ, ಮಾರಿಕಾಂಬಾ ಕಾಲೇಜು ಸಿಡಿಸಿ ಉಪಾಧ್ಯಕ್ಷ ಬಿ.ಕೆ. ಕೆಂಪರಾಜು, ಸರ್ಕಾರಿ ಪದವಿ ಕಾಲೇಜು ಸಿಡಿಸಿ ಉಪಾಧ್ಯಕ್ಷ ಎಸ್.ಎಂ. ಕಮನಳ್ಳಿ, ತಾಲೂಕು ಸಮಿತಿ ಎಸ್‌ಸಿ ವಿಭಾಗ ಉಪಾಧ್ಯಕ್ಷ ಗಂಗಾ ಜೋಗಳೇಕರ, ಹಿರಿಯ ಕಾಂಗ್ರೆಸ್ಸಿಗರಾದ ವಿಠ್ಠಲ ಪಾಟನಕರ್, ಬಾಲಕ್ರಷ್ಣ ಪಾಲೇಕರ್, ವಾಮದೇವ ಪಾವಸ್ಕರ್, ಎಚ್.ಜಿ. ಪಾವಸ್ಕ, ಎಂ.ಬಿ. ಪಾವಸ್ಕರ್ ಮುಂತಾದವರು ಇದ್ದರು.