ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ -ಬೊಮ್ಮಾಯಿ

| Published : Apr 26 2024, 12:51 AM IST

ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ -ಬೊಮ್ಮಾಯಿ
Share this Article
  • FB
  • TW
  • Linkdin
  • Email

ಸಾರಾಂಶ

ದೇಶಕ್ಕೆ ಸಾಮಾಜಿಕ ನ್ಯಾಯ ಕೊಟ್ಟವರು ಡಾ. ಬಾಬಾಸಾಹೇಬ ಅಂಬೇಡ್ಕರ್. ಅವರ ಯೋಜನೆಯನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭೆ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಿರೇಕೆರೂರು: ದೇಶಕ್ಕೆ ಸಾಮಾಜಿಕ ನ್ಯಾಯ ಕೊಟ್ಟವರು ಡಾ. ಬಾಬಾಸಾಹೇಬ ಅಂಬೇಡ್ಕರ್. ಅವರ ಯೋಜನೆಯನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭೆ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. ತಾಲೂಕಿನ ಮಕರಿ, ನಾಗವಂದ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು.

ಕಾಂಗ್ರೆಸ್‌ನವರು ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಅವರು ಸಂಸತ್ತಿಗೆ ಬರದಂತೆ ನೋಡಿಕೊಂಡಿದ್ದರು. ಅವರು ನಿಧನರಾದಾಗ ದೆಹಲಿಯಲ್ಲಿ ಅವರ ಅಂತ್ಯ ಸಂಸ್ಕಾರಕ್ಕೆ ಆರು ಅಡಿ ಜಾಗವನ್ನೂ ಕಾಂಗ್ರೆಸ್ ಕೊಡಲಿಲ್ಲ. ಈಗ ಅಂಬೇಡ್ಕರ ಬಗ್ಗೆ ಮಾತನಾಡುತ್ತಾರೆ. ಅವರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ನವರಿಗೆ ಇಲ್ಲ ಎಂದು ಹೇಳಿದರು.ಮಾಜಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ಹಾವೇರಿ- ಗದಗ ಲೋಕಸಭಾ ಕ್ಷೇತ್ರದಲ್ಲಿ ನಾಲ್ಕನೇ ಬಾರಿಯು ಬಿಜೆಪಿಗೆ ಜಯ ಸಿಗುತ್ತದೆ. ಜಿಲ್ಲಾದ್ಯಂತ ಎಲ್ಲೆಡೆ ಬಿಜೆಪಿ ಬಗ್ಗೆ ಮತದಾರರಲ್ಲಿ ಒಲವು ಇದೆ. ಪ್ರಧಾನಿ ಮೋದಿ ಅವರು ಹತ್ತು ವರ್ಷಗಳಲ್ಲಿ ಜಾರಿಗೆ ತಂದಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಮತದಾರರು ವಿಶ್ವಾಸ ತಾಳಿದ್ದಾರೆ. ದೇಶದ ಭದ್ರತೆ ಮತ್ತು ಅಖಂಡತೆಯನ್ನು ಕುರಿತು ಜನರು ಯೋಚಿಸುತ್ತಿದ್ದಾರೆ ಎಂದರು.

ಈ ವೇಳೆ ಎಸ್.ಎಸ್.ಪಾಟೀಲ, ಪಾಲಾಕ್ಷಗೌಡ ಪಾಟೀಲ, ಲಿಂಗರಾಜ ಚಪ್ಪರದಳ್ಳಿ, ಎನ್.ಎಂ.ಈಟೇರ, ಆರ್.ಎನ್.ಗಂಗೋಳ, ರವಿಶಂಕರ ಬಾಳಿಕಾಯಿ, ದೇವರಾಜ ನಾಗಣ್ಣನವರ, ಸೃಷ್ಟಿ ಪಾಟೀಲ, ಆನಂದಪ್ಪ ಹಾದಿಮನಿ, ಮಾಲತೇಶ ಗಂಗೋಳ ಇತರರು ಇದ್ದರು.