ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಘೋಷಣೆ ಧೈರ್ಯ ಇಲ್ಲ

| Published : Apr 17 2024, 01:22 AM IST

ಸಾರಾಂಶ

ಬಹಳಷ್ಟು ಮಾತನಾಡುತ್ತಿರುವ ಕಾಂಗ್ರೆಸ್ಸಿನ ಸ್ನೇಹಿತರು ತಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ. ಇದುವರೆಗೂ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳುವ ಧೈರ್ಯವೇ ಕಾಂಗ್ರೆಸ್ಸಿಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.

- ರಾಜ್ಯದಲ್ಲಿ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ: ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ - - -

ಕನ್ನಡಪ್ರಭ ವಾರ್ತೆ, ದಾವಣಗೆರೆ ಬಹಳಷ್ಟು ಮಾತನಾಡುತ್ತಿರುವ ಕಾಂಗ್ರೆಸ್ಸಿನ ಸ್ನೇಹಿತರು ತಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ. ಇದುವರೆಗೂ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳುವ ಧೈರ್ಯವೇ ಕಾಂಗ್ರೆಸ್ಸಿಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದರು.

ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಸ್ನೇಹಿತರು ಬಹಳಷ್ಟು ಮಾತನಾಡುತ್ತಿರುವುದು ಕೇಳುತ್ತಿದ್ದೇವೆ. ಲೋಕಸಭೆ ಚುನಾವಣೆ ನಂತರ ಇವರೆಲ್ಲಾ ಎಲ್ಲಿರುತ್ತಾರೆ ಎಂದು ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಆಗುವುದು ನಿಶ್ಚಿತ. ರಾಜ್ಯದಲ್ಲಿ 28 ಕ್ಷೇತ್ರಗಳನ್ನೂ ನಾವು ಗೆಲ್ಲುತ್ತೇವೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆಯಿಂದ, ಪ್ರಧಾನಿ ನರೇಂದ್ರ ಮೋದಿ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒಟ್ಟಾಗಿರುವುದರಿಂದ ನಿಶ್ಚಿತವಾಗಿ ನಮ್ಮ ಗುರಿ ಮುಟ್ಟುತ್ತೇವೆ. ಹಾಲು-ಜೇನಿನಂತೆ ಜೆಡಿಎಸ್-ಬಿಜೆಪಿ ಹೊಂದಾಣಿಕೆಯೂ ಇದೇ ರೀತಿ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.

ಸಂಸದ ಜಿ.ಎಂ.ಸಿದ್ದೇಶ್ವರ, ಜೆಡಿಎಸ್ ನಾಯಕ, ಮಾಜಿ ಶಾಸಕ ಎಚ್.ಎಸ್.ಶಿವಶಂಕರ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ, ವಿಪ ಸದಸ್ಯ ಎನ್.ರವಿಕುಮಾರ, ನಿಕಟ ಪೂರ್ವ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್, ಹರಿಹರ ಶಾಸಕ ಬಿ.ಪಿ.ಹರೀಶ, ಮಾಜಿ ಸಚಿವ ಮುರುಗೇಶ ನಿರಾಣಿ ಇತರರು ಇದ್ದರು.

- - - ಕೋಟ್‌ ಕಾಂಗ್ರೆಸ್‌ ಇಂದಿರಾ ಗಾಂಧಿ, ರಾಜೀವ್ ಗಾಂಧಿಗೆ 15 ಎಕರೆ, 30 ಎಕರೆ ಜಾಗ ನೀಡಿದ್ದಾರೆ. ಆದರೆ, ಬಾಬಾ ಸಾಹೇಬ್‌ ಅವರಿಗೆ ತುಂಡು ಜಾಗವನ್ನೂ ಕೊಡಲಿಲ್ಲ. ಅದೇ ಪ್ರಧಾನಿ ಮೋದಿ ಸರ್ಕಾರ ಅಂಬೇಡ್ಕರ್ ಹುಟ್ಟಿದ ಊರು, ನಾಗಪುರ, ಮುಂಬೈನಲ್ಲಿ ಸಮಾಧಿ ಅಭಿವೃದ್ಧಿಪಡಿಸಿದೆ. ದೆಹಲಿಯಲ್ಲಿ ಅಂಬೇಡ್ಕರ್ ಮನೆ ಮ್ಯೂಸಿಯಂ ಆಗಿ ಮಾಡಿದೆ

- ಬಿ.ಎಸ್. ಯಡಿಯೂರಪ್ಪ, ಮಾಜಿ ಸಿಎಂ

- - -

-16ಕೆಡಿವಿಜಿ4:

ದಾವಣಗೆರೆ ಜಿಎಂಐಟಿ ಅತಿಥಿ ಗೃಹದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.