ಲಂಬಾಣಿ ಜನಾಂಗಕ್ಕೆ ಪ್ರಾತಿನಿಧ್ಯ ನೀಡದ ಕಾಂಗ್ರೆಸ್

| Published : Apr 23 2024, 12:49 AM IST

ಲಂಬಾಣಿ ಜನಾಂಗಕ್ಕೆ ಪ್ರಾತಿನಿಧ್ಯ ನೀಡದ ಕಾಂಗ್ರೆಸ್
Share this Article
  • FB
  • TW
  • Linkdin
  • Email

ಸಾರಾಂಶ

ಲಂಬಾಣಿ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡದೆ ಕಾಂಗ್ರೆಸ್ ಪಕ್ಷ ವಂಚನೆ ಮಾಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪಿಸಿದರು.

ಚಿತ್ರದುರ್ಗ: ಲಂಬಾಣಿ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡದೆ ಕಾಂಗ್ರೆಸ್ ಪಕ್ಷ ವಂಚನೆ ಮಾಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪಿಸಿದರು.

ವಿನಾಯಕ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಶಕ್ತಿ ಪ್ರದರ್ಶನ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಾಂಡ ನಿಗಮಗಳನ್ನು ರಚಿಸಿ ಬಂಜಾರರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದರು. ಕಾಂಗ್ರೆಸ್ ಸರ್ಕಾರ ನಮ್ಮ ಜನಾಂಗದವರನ್ನು ಕೆಪಿಎಸ್ಸಿ ಸದಸ್ಯರನ್ನಾಗಿಯೂ ಮಾಡಲಿಲ್ಲ. ಲೋಕಸಭೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೂಡ ನೀಡದೆ ಮೂಲೆಗುಂಪು ಮಾಡಿದೆ. ಅದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಎಂಪಿ ಚುನಾವಣೆಗೆ ಟಿಕೇಟ್ ನೀಡಿ ಸಂಸತ್‍ಗೂ ಕಳಿಸಿಕೊಟ್ಟಿತು. ಈ ಬಾರಿ ರಾಜ್ಯಾದ್ಯಂತ ಬಿಜೆಪಿ ಬೆಂಬಲಿಸಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ಗೋವಿಂದ ಕಾರಜೋಳರನ್ನು ಬಹುಮತಗಳಿಂದ ಗೆಲ್ಲಿಸಿಲಾಗುವುದು ಎಂದರು.

ಜಿಲ್ಲಾ ಬಂಜಾರ ಸಮಾಜದ ಅಧ್ಯಕ್ಷ ಎಂ.ಸತೀಶ್‍ಕುಮಾರ್ ಮಾತನಾಟಡಿ ಬಂಜಾರರನ್ನು ಕಾಂಗ್ರೆಸ್ ಸರ್ಕಾರ ಹಿಂದಿನಿಂದಲೂ ನಿರ್ಲಕ್ಷಿಸಿಕೊಂಡು ಬರುತ್ತಿದೆ. ಏಕೈಕ ಶಾಸಕ ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ಕೊಟ್ಟಿಲ್ಲ. ಲೋಕಸಭೆ ಚುನಾವಣೆಯಲ್ಲಿಯೂ ಬಂಜಾರ ಜನಾಂಗಕ್ಕೆ ಟಿಕೇಟ್ ನೀಡದೆ ವಂಚಿಸಿದೆ. ಹಾಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ಗೋವಿಂದ ಕಾರಜೋಳರನ್ನು ಬಹುಮತಗಳಿಂದ ಗೆಲ್ಲಿಸಿಕೊಳ್ಳುವುದಾಗಿ ತಿಳಿಸಿದರು.

ಡಾ.ಜಯಸಿಂಹ ಲೋಕನಾಥ್ ಮಾತನಾಡಿ ದೇಶ ಸುಭದ್ರವಾಗಿರಬೇಕಾದರೆ ನರೇಂದ್ರಮೋದಿ 3ನೇ ಬಾರಿಗೆ ಪ್ರಧಾನಿಯಾಗಬೇಕೆಂಬುದು ಎಲ್ಲರ ಆಸೆ. ಅದಕ್ಕಾಗಿ ರಾಜ್ಯಾದ್ಯಂತ ಬಂಜಾರ ಸಮಾಜ ಬಿಜೆಪಿಗೆ ಬೆಂಬಲಿಸುವ ತೀರ್ಮಾನ ತೆಗೆದುಕೊಂಡಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ನೇಮಿರಾಜ್‍ನಾಯ್ಕ, ಕೃಷ್ಣನಾಯ್ಕ, ಡಾ.ಚಂದ್ರು ಲಮಾಣಿ, ಮಾಜಿ ಶಾಸಕ ಬಸವರಾಜ್‍ ನಾಯ್ಕ, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಸ್.ಸಿ.ಲಿಂಬ್ಯ ನಾಯ್ಕ, ಗಿರೀಶ್‍ ನಾಯ್ಕ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸುರೇಶ್‍ ನಾಯ್ಕ, ಸತೀಶ್‍ ನಾಯ್ಕ, ಜಯಸಿಂಹ ಕಾಟ್ರೋತ್, ವೀಣಬಾಯಿ, ಸುಶೀಲಾಬಾಯಿ, ಗೋವಿಂದ ನಾಯ್ಕ, ಚನ್ನಯ್ಯನಹಟ್ಟಿ ಮುಕುಂದ ನಾಯ್ಕ, ಪಾವಗಡದ ನಾಗಭೂಷಣ ನಾಯ್ಕ ವೇದಿಕೆಯಲ್ಲಿದ್ದರು.