ಸಾರಾಂಶ
ಯಲಬುರ್ಗಾ: ಕಾಂಗ್ರೆಸ್ ಸರ್ಕಾರ ಸುಳ್ಳು ಯೋಜನೆಗಳ ಮೂಲಕ ರಾಜ್ಯದ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಇದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.ಪಟ್ಟಣದ ಶಾದಿಮಹಲ್‌ನಲ್ಲಿ ಶನಿವಾರ ಬಿಜೆಪಿದಿಂದ ಹಮ್ಮಿಕೊಂಡ ಯಲಬುರ್ಗಾ ಮಂಡಲದ ಕಾರ್ಯಕಾರಿಣಿ ಸಭೆ ಮತ್ತು ಗಾಂವ್ ಚಲೋ ಅಭಿಯಾನ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ಬಿಜೆಪಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗಾಗಿ ಎಲ್ಲರೂ ಶಕ್ತಿಮೀರಿ ಶ್ರಮಿಸೋಣ ಎಂದರು.ರಾಜ್ಯ ಕಾಂಗ್ರೆಸ್ ಸರ್ಕಾರ ಬರೀ ಗ್ಯಾರಂಟಿ ನೆಪದಲ್ಲಿ ಮುಳುಗಿದೆ. ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿವೆ. ದೇಶವನ್ನು ಪ್ರಧಾನಿ ನರೇಂದ್ರ ಮೋದಿ ವಿಶ್ವಗುರುವಾಗಿಸಿದ್ದಾರೆ. ಕೇಂದ್ರದ ಯೋಜನೆಗಳನ್ನು ಜನರ ಮನೆಬಾಗಿಲಿಗೆ ಮುಟ್ಟಿಸುವ ಮೂಲಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಹೆಚ್ಚಿನ ಮತಗಳನ್ನು ಪಡೆಯಲು ಪ್ರತಿಯೊಬ್ಬರು ಅಭ್ಯರ್ಥಿಯ ಗೆಲುವಿಗೆ ದುಡಿಯಬೇಕು. ರಾಜ್ಯದಲ್ಲಿ ಈ ಸಾರಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮೂರನೇ ಬಾರಿಗೆ ಪ್ರಧಾನಿ ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗುವುದು ಶತಸಿದ್ಧ ಎಂದು ಅಭಿಪ್ರಾಯಪಟ್ಟರು.ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣನವರ ಮಾತನಾಡಿ, ನನ್ನ ಪಕ್ಷ ನಿಷ್ಠೆ ಗುರುತಿಸಿ ಹೈಕಮಾಂಡ್ ಜವಾಬ್ದಾರಿ ಕೊಟ್ಟಿದೆ. ಅದನ್ನು ಯಾವುದೇ ಕಪ್ಪು ಚುಕ್ಕೆಯಿಲ್ಲದೇ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು.ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ, ಅಭಿಯಾನದ ಜಿಲ್ಲಾ ಸಹ ಸಂಚಾಲಕ ಕೆ.ಮಹೇಶ, ಬಿಜೆಪಿ ಹಿರಿಯ ಮುಖಂಡರಾದ ಬಸವಲಿಂಗಪ್ಪ ಭೂತೆ, ವೀರಣ್ಣ ಹುಬ್ಬಳ್ಳಿ, ಅರವಿಂದಗೌಡ ಪಾಟೀಲ್, ಸುಧಾಕರ ದೇಸಾಯಿ, ರತನ್ ದೇಸಾಯಿ, ಕಳಕಪ್ಪ ಕಂಬಳಿ, ಶಿವಕುಮಾರ್ ನಾಗಲಾಪುರಮಠ, ಹಂಚ್ಯಾಳಪ್ಪ ತಳವಾರ, ಶಿವಲೀಲಾ ದಳವಾಯಿ, ಅಯ್ಯನಗೌಡ ಕೆಂಚಮ್ಮನವರ್, ಬೂತ್ ಅಧ್ಯಕ್ಷ, ಕಾರ್ಯಕರ್ತರು ಮತ್ತಿತರರು ಇದ್ದರು.