ಮೋದಿ ಅಲೆಯಲ್ಲಿ ಕಾಂಗ್ರೆಸ್ ಧೂಳಿಪಟ : ಬೈರತಿ ಬಸವರಾಜ

| Published : Apr 29 2024, 01:30 AM IST / Updated: Apr 29 2024, 11:16 AM IST

ಮೋದಿ ಅಲೆಯಲ್ಲಿ ಕಾಂಗ್ರೆಸ್ ಧೂಳಿಪಟ : ಬೈರತಿ ಬಸವರಾಜ
Share this Article
  • FB
  • TW
  • Linkdin
  • Email

ಸಾರಾಂಶ

.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನಡುವೆ ಖುರ್ಚಿ ಕದನ

ಲಕ್ಷ್ಮೇಶ್ವರ: ದೇಶದಲ್ಲಿ ಮೋದಿ ಅಲೆ ಸುನಾಮಿಯಂತೆ ಜೋರಾಗಿ ಬೀಸುತ್ತಿದೆ. ಕಾಂಗ್ರೆಸ್ ಮೋದಿ ಅಲೆಯಲ್ಲಿ ಕೊಚ್ಚಿ ಹೋಗುತ್ತದೆ ಎಂದು ಮಾಜಿ ಸಚಿವ ಬೈರತಿ ಬಸವರಾಜ ಹೇಳಿದರು.

ಭಾನುವಾರ ಪಟ್ಟಣದ ವಿವಿಧ ವಾರ್ಡಗಳಲ್ಲಿ ಮನೆ ಮನೆಗೆ ತೆರಳಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.

ಕಾಂಗ್ರೆಸ್ ನಾವಿಕನಿಲ್ಲದೆ ಹಡಗಿನಂತಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನಡುವೆ ಖುರ್ಚಿ ಕದನ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿಗೆ ಹಿನ್ನಡೆ ಉಂಟಾಗಿದೆ, ಇಷ್ಟಾದರೂ ಕಾಂಗ್ರೆಸ್ ಪಕ್ಷವು ಏನೂ ಆಗೇ ಇಲ್ಲ ಎನ್ನುವಂತೆ ವರ್ತನೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಜನರು ಕಣ್ಣಿಗೆ ಮಣ್ಣು ಏರುತ್ತಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯ ಅಂಚಿಗೆ ಬಂದು ನಿಂತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ಕೊಲೆ ಸುಲಿಗೆ, ದರೋಡೆ ಪ್ರಕರಣ ಹೆಚ್ಚಾಗಿದ್ದರೂ ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಬಸವರಾಜ ಬೊಮ್ಮಾಯಿ ಜನಪರ ಯೋಜನೆಗಳನ್ನು ಸಿದ್ದರಾಮಯ್ಯ ನಿಲ್ಲಿಸಿ ರಾಜ್ಯದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆದ್ದರಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರನ್ನು ಹೆಚ್ಚಿನ ಅಂತರದಲ್ಲಿ ಗೆಲ್ಲಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಈ ವೇಳೆ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿದರು. ಸುನೀಲ ಮಹಾಂತಶೆಟ್ಟರ, ರವಿ ದಂಡಿನ, ಗಂಗಾಧರ ಮೆಣಸಿನಕಾಯಿ, ನವೀನ ಬೆಳ್ಳಟ್ಟಿ, ಸಂತೋಷ ಜಾವೂರ, ಪ್ರವೀಣ ಬಾಳಿಕಾಯಿ, ವಿಜಯ ಹತ್ತಿಕಾಳ, ವಿಜಯ ಕುಂಬಾರ, ಬಸವರಾಜ ಚಕ್ರಸಾಲಿ, ವಿಶಾಲ ಬಟಗುರ್ಕಿ, ಅನೀಲ ಮುಳಗುಂದ ಸೇರಿದಂತೆ ಅನೇಕರು ಇದ್ದರು.