ಸಾರಾಂಶ
ಪಾಲಬಾವಿ: ಬಿಜೆಪಿ ಭದ್ರಕೋಟೆಯಾಗಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಬಾವುಟ ಹಾರಿಸಬೇಕು ಮತ್ತು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿಯವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ ಪಾಲಬಾವಿ: ಬಿಜೆಪಿ ಭದ್ರಕೋಟೆಯಾಗಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಬಾವುಟ ಹಾರಿಸಬೇಕು ಮತ್ತು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿಯವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದರು.
ಸವಸುದ್ದಿ ಗ್ರಾಮದ ಕಾಂಗ್ರೆಸ್ ಮುಖಂಡ ಶ್ರೀಮಂತಗೌಡ ಪಾಟೀಲ ತೋಟದ ಮನೆಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಶಕ್ತಿ ಯೋಜನೆಗಳ ಬಗ್ಗೆ ಕಾರ್ಯಕರ್ತರು ಮತದಾರರ ಮನೆಗಳಿಗೆ ಹೋಗಿ ಮುಟ್ಟಿಸಬೇಕು. ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಸೂಚನೆ ನೀಡಿದರು.ಶಾಸಕ ಮಹೇಂದ್ರ ತಮ್ಮಣ್ಣವರ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ನನಗೆ 25 ಸಾವಿರ ಮತಗಳ ಲೀಡ್ ಕೊಟ್ಟಿದ್ದೀರಿ, ಅದಕ್ಕಿಂತಲೂ ಹೆಚ್ಚಿನ ಲೀಡ್ ಪ್ರಿಯಾಂಕ ಜಾರಕಿಹೊಳಿ ಅವರಿಗೆ ಕುಡಚಿ ಕ್ಷೇತ್ರದಿಂದ ಕೊಡುತ್ತೇವೆ ಎಂದು ವಾಗ್ದಾನ ನೀಡಿದರು.
ಮಾಜಿ ಶಾಸಕ ಎಸ್.ಬಿ.ಘಾಟಗೆ, ಯುವ ನಾಯಕ ರಾಹುಲ ಜಾರಕಿಹೊಳಿ, ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷ ಅರ್ಜುನ ನಾಯಿಕವಾಡಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅಪ್ಪಾಸಾಬ ಕುಲಗೂಡೆ, ಕಾಡಾ ಮಾಜಿ ಅಧ್ಯಕ್ಷ ಸಂಜೀವಕುಮಾರ ಬಾನೆ, ಕುಡಚಿ ಬ್ಲಾಕ್ ಅಧ್ಯಕ್ಷ ಪ್ರದೀಪ ಹಾಲ್ಗುಣಿ, ಜಿಲ್ಲಾ ಘಟಕದ ಮಹಿಳಾ ಅಧ್ಯಕ್ಷೆ ನಿರ್ಮಲಾ ಪಾಟೀಲ, ಕಿಸಾನ್ ಘಟಕದ ರಾಜ್ಯ ಉಪಾಧ್ಯಕ್ಷ ದಸ್ತಗೀರ ಕಾಗವಾಡ, ಕೆಪಿಸಿಸಿ ಒಬಿಸಿ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ, ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕಿ ಮೀನಾಕ್ಷಿ ನೆಲಗಲಿ, ಅಶೋಕ ಕೊಪ್ಪದ, ಡಾ.ಮಗದುಮ್ಮ, ಸತಾರ್ ಮುಲ್ಲಾ, ಬಣಪ್ಪ ಹುಲ್ಲೋಳಿ, ಬಸವರಾಜ ಮುಗಳಿಹಾಳ, ಶ್ರೀಮಂತಗೌಡ ಪಾಟೀಲ, ಪರಗೌಡ ಪಾಟೀಲ, ಕಿರಣ ಪಾಟೀಲ, ಸಚಿನ ನಾಯಿಕವಾಡಿ, ಗಿರೆಪ್ಪ ಬೆಳಕೂಡ, ಶಿವು ಪಾಟೀಲ, ನಾಗಪ್ಪ ನವಲ್ಯಾಳ, ರಾಮಕೃಷ್ಣ ನಾಯಿಕ, ದುಂಡಪ್ಪ ಬಡಿಗೇರ, ಮಹಾದೇವ ಸೂಜಿ, ಮಹಾದೇವ ಪಾಟೀಲ, ಮಲಗೌಡ ಪಾಟೀಲ, ಶ್ರೀನಿವಾಸ ಪಾಟೀಲ, ಸಂಗಪ್ಪ ಬಿದರಿ, ಸತ್ಯಪ್ಪ ನಿಪ್ಪಾಣಿ, ಬಸಪ್ಪ ಬಳಗಾರ, ಈರಪ್ಪ ಬಳಗಾರ ಭಾಗವಹಿಸಿದ್ದರು.