ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರಿಗೆ ಶಕ್ತಿ: ಅನಿತಾ ಹೇಮನಾಥ ಶೆಟ್ಟಿ

| Published : Apr 24 2024, 02:21 AM IST

ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರಿಗೆ ಶಕ್ತಿ: ಅನಿತಾ ಹೇಮನಾಥ ಶೆಟ್ಟಿ
Share this Article
  • FB
  • TW
  • Linkdin
  • Email

ಸಾರಾಂಶ

ದ. ಕ. ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಪರ ಉತ್ತಮ ಸ್ಪಂದನೆ ಇದೆ. ಜಿಲ್ಲೆಯಲ್ಲಿ ಈ ಬಾರಿ ಜನ ಬದಲಾವಣೆ ಬಯಸಿ ಪದ್ಮರಾಜ್ ಅವರನ್ನು ಗೆಲ್ಲಿಸಲಿದ್ದಾರೆ ಎಂದರು.

ಕನ್ನಡಪ್ರಭ ವಾರ್ತೆ ಪುತ್ತೂರು

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮುಖ್ಯವಾಗಿ ಮಹಿಳೆಯರ ಪ್ರಗತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜಾರಿಗೊಳಿಸಿದ ೫ ಗ್ಯಾರಂಟಿಗಳು ಮಹಿಳೆಯರಿಗೆ ಶಕ್ತಿ ತುಂಬಿದೆ. ಪ್ರಚಾರದ ಸಂದರ್ಭದಲ್ಲಿ ಮನೆ ಮನೆಗಳಲ್ಲಿ ಮಹಿಳೆಯರ ಖುಷಿ ಕಾಣಿಸುತ್ತಿದೆ. ಮಹಿಳೆಯರು ಕಾಂಗ್ರೆಸ್ ಪರವಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಜಿಲ್ಲಾ ಪಂಚಾಯಿಚಿ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅವರು ಮಂಗಳವಾರ ಸುದ್ದಿಗೋಷ್ಠಿ ಮಾತನಾಡಿ ದ. ಕ. ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಪರ ಉತ್ತಮ ಸ್ಪಂದನೆ ಇದೆ. ಜಿಲ್ಲೆಯಲ್ಲಿ ಈ ಬಾರಿ ಜನ ಬದಲಾವಣೆ ಬಯಸಿ ಪದ್ಮರಾಜ್ ಅವರನ್ನು ಗೆಲ್ಲಿಸಲಿದ್ದಾರೆ ಎಂದರು.

ಕಾಂಗ್ರೆಸ್ ಮಹಿಳೆಯರ ಪರ ಸರ್ಕಾರ, ಇಂದಿರಾಗಾಂಧಿ ಸರ್ಕಾರದಂದ ಆರಂಭಗೊಂಡು ರಾಜೀವಗಾಂಧಿ ಆಡಳಿತದಲ್ಲಿ ಸ್ಥಳೀಯಡಳಿತಗಳಲ್ಲಿ ಮಹಿಳಾ ಮೀಸಲಾತಿ ನೀಡಲಾಗಿತ್ತು. ದಿನೋಪಯೋಗಿ ವಸ್ತುಗಳು ಗಗನಕ್ಕೆರಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಮೂಲಕ ಮಹಿಳೆಯರ ನೆರವಿಗೆ ನಿಂತಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮಹಿಳಾ ಮುಖಂಡರಾದ ರೂಪರೇಖಾ ಆಳ್ವ, ವೇದಾವತಿ, ಅರುಣಾ ಡಿ. ರೈ, ಜಯಂತಿ ಪಟ್ಟುಮೂಲೆ ಇದ್ದರು.